ಬಂಟ್ವಾಳ: ದಕ್ಷಿಣ ಕನ್ನಡ ಕ್ಯಾಟರಿಂಗ್ ಮಾಲೀಕರ ಸಂಘ ಬಂಟ್ವಾಳ ವಲಯದ ವಾರ್ಷಿಕ ಮಹಾಸಭೆ ಮತ್ತು ಸತ್ಕಾರ ಕೂಟ ಬಿ.ಸಿ.ರೋಡಿನಲ್ಲಿ ಮಂಗಳವಾರ ನಡೆಯಿತು. ದ.ಕ. ಕ್ಯಾಟರಿಂಗ್ ಮಾಲೀಕರ ಸಂಘದ ಅಧ್ಯಕ್ಷ ಅಬ್ದುಲ್ ರಶೀದ್ ಅಮನ್ ಉದ್ಘಾಟಿಸಿ, ಅಧ್ಯಕ್ಷ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಮಾಡಿದರು.
ವಲಯದ ಅಧ್ಯಕ್ಷ ನಾರಾಯಣ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಿಗೆ ವಾಹನ ಪಾಸ್ ವಿತರಿಸಲಾಯಿತು. ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಬಡ ಕುಟುಂಬಕ್ಕೆ ಆರ್ಥಿಕ ಸಹಕಾರ ನೀಡಲಾಯಿತು. ಚಿಕಿತ್ಸೆಗೆ ಆರೋಗ್ಯ ನಿಧಿ ಹಸ್ತಾಂತರಿಸಲಾಯಿತು.
ಮಾಜಿ ಅಧ್ಯಕ್ಷ ದೀಪಕ್ ಕೋಟ್ಯಾನ್, ಕಾರ್ಯದರ್ಶಿ ಕರುಣಾಕರ ಪಡಿಯಾರ್, ಕೋಶಾಧಿಕಾರಿ ಪ್ರಕಾಶ್ ಲೋಬೋ ಉಪಸ್ಥಿತರಿದ್ದರು. ಸಂಘಟನಾ ಕಾರ್ಯದರ್ಶಿ ಆಂಟನಿ ಸಿಕ್ವೇರಾ ಸ್ವಾಗತಿಸಿ, ಉಪಾಧ್ಯಕ್ಷ ಸದಾನಂದ ಬಂಗೇರ ಪ್ರಾರ್ಥಿಸಿದರು, ವಲಯ ಕಾರ್ಯದರ್ಶಿ ಪ್ರಕಾಶ್ ಪೂಜಾರಿ ವಾರ್ಷಿಕ ವರದಿ ವಾಚಿಸಿದರು. ಕೋಶಾಧಿಕಾರಿ ರೋಶನ್ ಡಿಸೋಜ ವಂದಿಸಿದರು. ದಿನೇಶ್ ಸುವರ್ಣ ರಾಯಿ ನಿರೂಪಿಸಿದರು.