ಮೈಸೂರು: ನಗರದ ಶ್ರೀರಾಂಪುರದ ಮಾನಂದವಾಡಿ ರಸ್ತೆಯಲ್ಲಿ ಮಂಗಳವಾರ ಗೂಡ್ಸ್ ವಾಹನದಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ 4 ಜಾನುವಾರುಗಳನ್ನು ರಕ್ಷಿಸಿದ್ದಾರೆ.
ಪೊಲೀಸರು ಮಾನಂದವಾಡಿ ರಸ್ತೆಯಲ್ಲಿ ಗಸ್ತಿನಲ್ಲಿದ್ದ ಸಂದರ್ಭ ಗೂಡ್ಸ್ ವಾಹನದಲ್ಲಿ ಜಾನುವಾರುಗಳನ್ನು ಸಾಗಿಸುತ್ತಿರುವುದನ್ನು ಕಂಡು ತಡೆದು ನಿಲ್ಲಿಸಿ ವಿಚಾರಿಸಿದಾಗ ಕಸಾಯಿ ಖಾನೆಗೆ ಸಾಗಾಟ ಮಾಡುತ್ತಿರುವುದು ತಿಳಿದು ಬಂತು. ಅಶೋಕಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.