ಧಾರವಾಡ: ಜಾನುವಾರುಗಳಿಗೆ ತಗಲುವ ಕಾಲುಬಾಯಿ ರೋಗ ತಡೆಗಟ್ಟಲು ಪಶುಪಾಲನಾ ಇಲಾಖೆಯಿಂದ ಜಿಲ್ಲೆಯಾದ್ಯಂತ ಸೆ. 26ರಿಂದ ಅ. 25ರವರೆಗೆ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ೪ನೇ ಸುತ್ತಿನ ಕಾಲುಬಾಯಿ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಕಾಲುಬಾಯಿ ರೋಗದಿಂದ ಜಾನುವಾರುಗಳಲ್ಲಿ ಗರ್ಭ ಕಟ್ಟುವಿಕೆಯಲ್ಲಿ ವಿಳಂಬ, ಸಾಮರ್ಥ್ಯ ನಷ್ಟ ಮತ್ತು ಹಾಲಿನ ಇಳುವರಿಯಲ್ಲಿ ಇಳಿಮುಖವಾಗುವ ಸಾಧ್ಯತೆ ಇದೆ. ಆದ್ದರಿಂದ ಜಾನುವಾರುಗಳ ಸುರಕ್ಷತೆಗಾಗಿ ೩ ತಿಂಗಳ ಮೇಲ್ಪಟ್ಟ ಜಾನುವಾರುಗಳಿಗೆ ಉಚಿತವಾಗಿ ಕಾಲುಬಾಯಿ ಲಸಿಕೆ ಹಾಕಲಾಗುವುದು. ಜಿಲ್ಲೆಯ ರೈತರು, ಸಾರ್ವಜನಿಕರು ಲಸಿಕೆ ಹಾಕಿಸಿಬೇಕು ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ. ರವಿ ಸಾಲಿಗೌಡರ ತಿಳಿಸಿದ್ದಾರೆ.