ವಿರಾಜಪೇಟೆ: ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ನವೆಂಬರ್ 27 ರಂದು ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಕಾವೇರಿ ಕಾರ್ನಿವಾಲ್ ಜಿಲ್ಲಾ ಮಟ್ಟದ ಫೆಸ್ಟ್ ಹಮ್ಮಿಕೊಳ್ಳಲಾಗಿದೆ ಎಂದು ಕಾವೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎನ್.ಎಂ.ನಾಣಯ್ಯ ಹೇಳಿದರು.
ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆ ಹಾಗೂ ಮಕ್ಕಳಲ್ಲಿನ ಪ್ರತಿಭೆ ಅನಾವರಣಗೊಳಿಸುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
5 ವರ್ಷಗಳಿಂದ ‘ಕಾವೇರಿ ಕಾರ್ನಿವಾಲ್ ಫೆಸ್ಟ್’ ನಡೆಸಿಕೊಂಡು ಬರುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿ ಸಂಚಾಲಕಿ ದಮಯಂತಿ ಮಾತನಾಡಿ, ವಿದ್ಯಾರ್ಥಿಗಳಿಗೆ ಗುಂಪು ನೃತ್ಯ, ಜಾನಪದ ಗೀತೆ, ಸಮೂಹ ಗಾಯನ ಪ್ರತಿ, ಮಾದರಿ ತಯಾರಿ, ಬಾಲಕರಿಗೆ ಹಾಕಿ ಪಂದ್ಯ, ಹಗ್ಗ ಜಗ್ಗಾಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದರು.
ಕಾಲೇಜಿನ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳು 23 ಅಂಗಡಿ ಮಳಿಗೆಗಳನ್ನು ಇರಿಸುತ್ತಿದ್ದು, ಕಲಿಕೆಯೊಂದಿಗೆ ಗಳಿಕೆ ಎಂಬ ಧ್ಯೇಯದೊಂದಿಗೆ ಕೊಡಗಿನ ಸಾಂಪ್ರದಾಯಿಕ ತಿನಿಸುಗಳ ಮಾರಾಟ ಮಾಡಲು ಆದ್ಯತೆ ನೀಡಲಾಗಿದೆ ಎಂದು ವಿವರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಉಪನ್ಯಾಸಕರಾದ ಡಯಾನ, ಗಾಯತ್ರಿ, ಅನುಪಮ ಇದ್ದರು.,ಅನುಪಮ ಇದ್ದರು