ಜಿಲ್ಲೆ

ನಮಗೆ ನೀರಿಲ್ಲ, ತಮಿಳುನಾಡಿಗೆ ಏಕೆ ಬಿಡೋಣ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

ಮಂಡ್ಯ: ನಮಗೆ ಕುಡಿಯಲು ನೀರಿಲ್ಲ, ತಮಿಳುನಾಡಿಗೆ ಏಕೆ ಬಿಡೋಣ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಅವರಿಗೆ ಬುದ್ದಿ ಭ್ರಮಣೆ ಆಗಿದೆ. ಶಿವ ಡ್ಯಾಂನಲ್ಲಿ ನೀರೆತ್ತಲು ಕೆಆರ್‌ಎಸ್ ಅಣೆಕಟ್ಟೆಯಿಂದ ನೀರು ಹರಿಸಲಾಗಿದೆ. ನಮ್ಮ ರೈತರಿಗೆ ನಮ್ಮಿಂದ ನೀರು ಕೊಡಲು ಆಗಲ್ಲ. ಇನ್ನು ತಮಿಳುನಾಡಿಗೆ ನೀರು ಕೊಡುವುದು ಎಲ್ಲಿಂದ ಎಂದಿದ್ದಾರೆ.

ತೆಲಂಗಾಣ ನೀರಿಗಾಗಿ ಮನವಿ ಮಾಡುತ್ತಿದ್ದಾರೆ. ನಾವು ನಿಮಗೆ ಕೊಡುತ್ತೇವೆ, ನೀವು ನಮಗೆ ಕೊಡಿ ಎನ್ನುತ್ತಿದ್ದಾರೆ. ಅದರ ಬಗ್ಗೆ ಯೋಚನೆ ಮಾಡುತ್ತಿದ್ದೇವೆ. ಬಿಜೆಪಿ ಅವರು ಮೊದಲು ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲಿ. ತಾನೂ ಮಾಡಿದ ತಪ್ಪು ಮುಚ್ಚಿಕೊಳ್ಳಲು ಬಿಜೆಪಿ ಈ ರೀತಿ ಮಾಡುತ್ತಿದ್ದಾರೆ. ನಮ್ಮನ್ನು ದಡ್ಡರು ಎಂದುಕೊಂಡಿದ್ದಾರಾ?. ಮೊದಲು ಕುಡಿಯುವ ನೀರಿಗೆ ಆದ್ಯತೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಲ್ಲ ಎಂದು ಹೇಳಿದ್ದಾರೆ.