ಜಮಖಂಡಿ ನಗರದ ಕತಾಟೆ ಪ್ಲಾಟ್‌ನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಜಗದೀಶ ಗುಡಗುಂಟಿ ಭೂಮಿಪೂಜೆ ನೆರವೇರಿಸಿದರು. ನಗರಸಭೆ ಅಧ್ಯಕ್ಷ ಪರಮಾನಂದ ಗವರೋಜಿ, ಅಜಯ ಕಡಪಟ್ಟಿ, ಮಲ್ಲು ದಾನಗೊಂಡ ಇದ್ದರು. 
ಜಿಲ್ಲೆ

ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ

ದತ್ತಾತ್ರೇಯ ಪಿ ಕುಲಕರ್ಣಿ

ಜಮಖಂಡಿ: ಅಲ್ಪಸಂಖ್ಯಾತ ಕಾಲನಿಗಳ ಸಮಗ್ರ ಅಭಿವೃದ್ಧಿ ಯೋಜನೆಯಡಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಗರದ ವಿವಿಧ ಕಡೆಗಳಲ್ಲಿ ಭಾನುವಾರ ಅಂದಾಜು 98 ಲಕ್ಷ ರೂ. ಕಾಮಗಾರಿಗೆ ಶಾಸಕ ಜಗದೀಶ ಗುಡಗುಂಟಿ ಭೂಮಿಪೂಜೆ ಮಾಡಿದರು.

ವಾರ್ಡ್ ನಂ. 6ರಲ್ಲಿ 18 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ, ಕತಾಟೆ ಪ್ಲಾಟ್‌ನಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ, ವಾರ್ಡ್ ನಂ.30ರಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ, ತಾಲೂಕಿನ ಕುಂಬಾರಹಳ್ಳ ಗ್ರಾಮದ ಬಸವನಗರದಲ್ಲಿ 30 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆಗೆ ಭೂಮಿಪೂಜೆ ನೆರವೇರಿಸಿದರು.

ನಗರಸಭೆ ಅಧ್ಯಕ್ಷ ಪರಮಾನಂದ ಗವರೋಜಿ, ಅಜಯ ಕಡಪಟ್ಟಿ, ಮಲ್ಲು ದಾನಗೊಂಡ, ನಗರ ಯೋಜನಾ ಪ್ರಾಧಿಕಾರ ಮಾಜಿ ಅಧ್ಯಕ್ಷ ಯಮನೂರ ಮೂಲಂಗಿ, ಶಂಕರ ಕಾಳೆ, ಪ್ರಶಾಂತ ಗಾಯಕವಾಡ, ಶಶಿಧರ ದೊಡಮನಿ, ಶ್ರೀಧರ ಕಂಬಿ, ಸುನೀಲ ಜೋಗದಂಡೆ, ರಾಘವೇಂದ್ರ ಜೋಶಿ ಇದ್ದರು.