ಗುಂಡ್ಲುಪೇಟೆ ತಾಲೂಕಿನ ಹಿರೀಕಾಟಿ ಗ್ರಾಮದಲ್ಲಿ ಗಣಿ ಇಲಾಖೆಯ ಅನುದಾನದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಗಣೇಶ್ ಪ್ರಸಾದ್ ಭೂಮಿ ಪೂಜೆ ನೆರವೇರಿಸಿದರು. ಲೀಲಾವತಿ, ನಂಜುಂಡಪ್ರಸಾದ್, ಬಿ.ಎಂ.ಮುನಿರಾಜು, ಎಸ್.ಎಸ್.ಮಧುಶಂಕರ್, ಎಚ್.ಎನ್. ಬಸವರಾಜು, ನೀಲಕಂಠಪ್ಪ ಇದ್ದರು. 
ಜಿಲ್ಲೆ

ಹಿರಿಕಾಟಿಯಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ

ಗುಂಡ್ಲುಪೇಟೆ :  ಗಣಿಗಾರಿಕೆಯಿಂದ ತೊಂದರೆಗೊಳಗಾಗಿ ಗಣಿ ಬಾಧಿತ ಪ್ರದೇಶಗಳಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು.

ತಾಲೂಕಿನ ಹಿರೀಕಾಟಿ ಗ್ರಾಮದಲ್ಲಿ ಗಣಿ ಇಲಾಖೆಯ 30 ಲಕ್ಷ ರೂ. ಅನುದಾನದಲ್ಲಿ ಸಾಮಾನ್ಯ ವರ್ಗದ ಬೀದಿ ಮತ್ತು 20 ಲಕ್ಷ ರೂ. ಅನುದಾನದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಬುಧವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಗ್ರಾಮದ ಸುತ್ತಮುತ್ತಲೂ ದೊಡ್ಡ ಪ್ರಮಾಣದಲ್ಲಿ ಗಣಿಗಾರಿಕೆ ನಡೆಯುತ್ತಿದ್ದು ಲಾರಿಗಳ ಸಂಚಾರದಿಂದ ಈ ಭಾಗದ ಗ್ರಾಮಗಳ ರಸ್ತೆಗಳು ಹಾಳಾಗಿವೆ. ಆದ್ದರಿಂದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

ಹೊರೆಯಾಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೀಲಾವತಿ, ಚಾಮುಲ್ ನಿರ್ದೇಶಕ ನಂಜುಂಡಪ್ರಸಾದ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಎಂ.ಮುನಿರಾಜು, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ ಎಸ್.ಎಸ್.ಮಧುಶಂಕರ್, ಎಚ್.ಎನ್. ಬಸವರಾಜು, ಮಾಜಿ ಸದಸ್ಯ ನೀಲಕಂಠಪ್ಪ ಹಾಗೂ ಇತರರು ಇದ್ದರು.