ಜಿಲ್ಲೆ

ರಸ್ತೆ ಕಾಮಗಾರಿಗೆ ಶಾಸಕರಿಂದ ಚಾಲನೆ,  ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಅಬ್ಬಯ್ಯ ಪಣ

Dharwada - Basavaraj Idli

ಹುಬ್ಬಳ್ಳಿ: ಜನರು ನನ್ನ ಮೇಲೆ ಭರವಸೆ ಇಟ್ಟು ಕಳೆದ ಮೂರು ಅವಧಿಯಿಂದ ಮತ ಚಲಾಯಿಸುತ್ತ ಬಂದಿದ್ದಾರೆ. ಕ್ಷೇತ್ರದ ಜನರ ಋಣ ನನ್ನ ಮೇಲಿದೆ. ಪೂರ್ವ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಗುರಿ ಎಂದು ಶಾಸಕ, ಸ್ಲಮ್ ಬೋರ್ಡ್ ಅಧ್ಯಕ್ಷ ಪ್ರಸಾದ ಅಬ್ಬಯ್ಯ ಹೇಳಿದರು.

ಹಳೇಹುಬ್ಬಳ್ಳಿ ಸದರ ಸೋಫಾ ಮತ್ತು ಜನ್ನತ್ ನಗರದಲ್ಲಿ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭಾನುವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಕ್ಷೇತ್ರದಾದ್ಯಂತ ಅಭಿವೃದ್ಧಿ ಕಾರ್ಯಗಳು ನಿರಂತರ ನಡೆಯುತ್ತಿವೆ. ರಸ್ತೆ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಗುತ್ತಿಗೆದಾರರಿಗೆ ಮತ್ತು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ನಾಗರಿಕರ ಬೇಡಿಕೆಯ ಮೇರೆಗೆ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಅನುದಾನ ಒದಗಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಜನರು ಸಹ ಆಡಳಿತದೊಂದಿಗೆ ಸಹಕರಿಸಬೇಕು. ನಗರದ ಅಂದ ಕಾಪಾಡುವಲ್ಲಿ ತಮ್ಮ ಪಾತ್ರ ನಿರ್ವಹಿಸಬೇಕು ಎಂದರು.

ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಶಾಕೀರ್ ಸನದಿ, ಪಾಲಿಕೆ ಸದಸ್ಯರು, ವಾರ್ಡ್ ಕಾಂಗ್ರೆಸ್ ಅಧ್ಯರು, ಸ್ಥಳಿಯ ಮುಖಂಡರು, ಕಾರ್ಯಕರ್ತರು ಇದ್ದರು.