ಜಿಲ್ಲೆ

ಸಿಡಿ ಪ್ರಕರಣದ ಕಿಂಗ್​ಪಿನ್ ನರೇಶ ಗೌಡ ಪತ್ನಿ ಹಾಗೂ ತಾಯಿಯ ವಿಚಾರಣೆ ನಡೆಸಿದ ಎಸ್​ಐಟಿ

ತುಮಕೂರು: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರದು ಎನ್ನಲಾದ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್​ಐಟಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಈ ಕುರಿತು ಬುಧವಾರ ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಭುವನಹಳ್ಳಿಗೆ ತೆರಳಿರುವ ಎಸ್​ಐಟಿ ತಂಡ ಸಿಡಿ ಪ್ರಕರಣದ ಕಿಂಗ್ ಪಿನ್ ನರೇಶ್ ಗೌಡ ಪತ್ನಿ ಪೂಜಾ ಅವರನ್ನು ತೀವ್ರ ವಿಚಾರಣೆ ನಡೆಸಿದೆ.

ವಿಚಾರಣೆ ಬಳಿಕ ಪೂಜಾ ಹಾಗು ನರೇಶ್ ಗೌಡ ತಾಯಿಯನ್ನ ಎಸ್​ಐಟಿ ಪೊಲೀಸರು ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ.

ರಮೇಶ್​ ಜಾರಕಿಹೊಳಿ ಅವರದು ಎನ್ನಲಾದ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿ ತಯಾರಿಕೆ ಹಿಂದೆ ನರೇಶಗೌಡ ಹಾಗೂ ಆತನ ಕೆಲ ಸಂಗಡಿಗರು ಷಡ್ಯಂತ್ರ ನಡೆಸಿದ್ದಾರೆ ಎಂದು ಪೊಲೀಸರು ಆರೋಪಿಸಿ ಅವರನ್ನು ಹುಡುಕಾಡುತ್ತಿದ್ದಾರೆ. ಆದರೆ, ಆರೋಪಿಗಳು ಪೊಲೀಸರ ಕೈಗೆ ಸಿಗದೇ ತಲೆ ಮರೆಸಿಕೊಂಡು ಓಡಾಡುತ್ತಿದ್ದಾರೆ.