ಚಿಕ್ಕಮಗಳೂರು: ಸೆ. ೧೫ರಂದು ನಡೆಯಲ್ಲಿರುವ ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಚರಣೆಯನ್ನು ಎಲ್ಲ ಜಿಲ್ಲೆಗಳಲ್ಲೂ ಕಟ್ಟುನಿಟ್ಟಾಗಿ ಆಚರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿ ಮಾತನಾಡಿದ ಸಿಎಂ, ಪ್ರಜಾಪ್ರಭುತ್ವ ರಾಷ್ಟçವಾದ ನಮ್ಮ ದೇಶದ ಸಾರ್ವಭೌಮತ್ವದ ಹಿರಿಮೆಯನ್ನು ಎತ್ತಿ ಹಿಡಿಯುವುದು ಎಲ್ಲರ ಆದ್ಯ ಕರ್ತವ್ಯ ಎಂದರು.
ಚಿಕ್ಕಮಗಳೂರು ಜಿಲ್ಲೆಯ ಬಗ್ಗೆ ಮಾಹಿತಿ ನೀಡಿದ ಡಿಸಿ ಮೀನಾ ನಾಗರಾಜ್, ಸೆ. ೧೫ರಂದು ಬೀದರ್‌ನಿಂದ ಚಾಮರಾಜನಗರದವರೆಗೆ ಮಾನವ ಸರಪಳಿ ನಿರ್ಮಿಸಿ ಪ್ರಜಾಪ್ರಭುತ್ವದ ಮಹತ್ವವನ್ನು ದಾರಿಯುದ್ದಕ್ಕೂ ಪಸರಿಸುವ ಕಾರ್ಯಕ್ರಮ ಇದಾಗಿದೆ. ಜಿಲ್ಲೆಯಲ್ಲಿ ಗಡಿ ಭಾಗಗಳಾದ ಮಾಗಡಿ ಕೈ ಮರದಿಂದ ಎಂಸಿಹಳ್ಳಿ ವರೆಗೆ ೯೨ ಕಿ.ಮೀ. ಮಾನವ ಸರಪಳಿ ನಿರ್ಮಿಸಿ ಸಂವಿಧಾನದ ಬಗ್ಗೆ ಅರಿವು ಮೂಡಿಸಲು ಕ್ರಮಕೈಗೊಳ್ಳಲಾಗಿದೆ. ಸುಮಾರು ೭೦ ರಿಂದ ೮೦ ಸಾವಿರ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈಗಾಗಲೇ ತಾಲೂಕು ಮಟ್ಟದ ಅಧಿಕಾರಿಗಳು ಕಾರ್ಯಕ್ರಮ ಯಶಸ್ವಿಗೊಳಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಹೇಳಿದರು.
ಚಿಕ್ಕಮಗಳೂರು ಜಿಲ್ಲೆಯಲ್ಲಿ ೯೨ ಕಿಮೀ ಮಾನವ ಸರಪಳಿ ಹಾಗೂ ಸಂವಿಧಾನ ಬಗ್ಗೆ ತಿಳಿವಳಿಕೆ ಮೂಡಿಸುವುದು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಮಾಗಡಿ ಕೈಮರದಿಂದ ಎಐಟಿ ಸರ್ಕಲ್, ಸಖರಾಯಪಟ್ಟಣ, ಕಡೂರು-ಬೀರೂರು, ತರೀಕೆರೆ ಗಡಿ ಭಾಗವಾದ ಎಂ.ಸಿ.ಹಳ್ಳಿವರೆಗೆ ಕಾರ್ಯಕ್ರಮ ನಡೆಸಲಾಗುವುದು. ಪ್ರತಿ ೧ ಕಿಮೀ ದೂರದಲ್ಲಿ ಆ ಭಾಗದ ಸ್ಥಳೀಯ ಶಾಲಾ ವಿದ್ಯಾರ್ಥಿಗಳು, ಸಂಘ ಸಂಸ್ಥೆ ಪದಾಧಿಕಾರಿಗಳು, ವಿವಿಧ ಸಂಘಟನೆಗಳು, ವಿವಿಧ ಸಮುದಾಯದ ಪ್ರಮುಖರು, ಮಠ ಮಾನ್ಯಗಳು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಸ್ಥಳೀಯ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ, ಆಯಾ ಗ್ರಾಮದ ಜನತೆ, ಸ್ತಿçÃಶಕ್ತಿ ಸಂಘಗಳು, ವಿವಿಧ ಸಂಘಗಳ ಪದಾಧಿಕಾರಿಗಳು ಭಾಗವಹಿಸಿ ಮಾನವ ಸರಪಳಿ ನಿರ್ಮಿಸಿ ಸಂವಿಧಾನದ ಮಹತ್ವವನ್ನು ಸಾರುವ ಕೆಲಸ ಮಾಡಲಾಗುತ್ತದೆ ಎಂದರು.
ಯುವ ಪೀಳಿಗೆಗೆ ಪ್ರಜಾಪ್ರಭುತ್ವದ ಮೌಲ್ಯಾನುಸಾರ ಶಕ್ತರಾಗಲು ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಜಾಗೃತಿ ಮೂಡಿಸುವುದು ಬಹಳ ಅವಶ್ಯಕವಾಗಿದೆ. ಈ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರು ಸ್ವಯಂ ಭಾಗವಹಿಸಿ ಯಶಸ್ವಿಗೊಳಿಸಲು ಮನವಿ ಮಾಡಲಾಗಿದೆ. ಪ್ರತಿಯೊಂದು ಕಿ.ಮೀ.ಗೂ ಸರ್ಕಾರಿ ಹಿರಿಯ ಅಧಿಕಾರಿಗಳಿಗೆ ಜವಾಬ್ದಾರಿಯನ್ನು ವಹಿಸಲಾಗಿದೆ. ಆಯಾಯ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ತಾಲೂಕು ಅಧಿಕಾರಿಗಳಿಗೆ ನಿಗಾ ವಹಿಸಲು ವಿವಿಧ ಕಾರ್ಯಕ್ರಮಗಳ ಉಸ್ತುವರಿ ವಹಿಸಲಾಗಿದೆ ಎಂದು ಮಾಹಿತಿ ನೀಡಿದರು.
ವೀಡಿಯೋ ಕಾನ್ಫರೆನ್ಸ್ನಲ್ಲಿ ಎಸ್‌ಪಿ ಜೀತೆಂದ್ರ ಕುಮಾರ್ ದಹಿಮ, ಉಪವಿಭಾಗಾಧಿಕಾರಿ ದಲ್ಜಿತ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಯೋಗೀಶ್ ಮತ್ತಿತರರು ಭಾಗಿಯಾಗಿದ್ದರು.