ಜಿಲ್ಲೆ

ಕಡಬ ತಾಲೂಕು ಕಚೇರಿಯಲ್ಲಿ ಆಚರಣೆ

ಸೌಮ್ಯ ಆರ್

ಕಡಬ: ಇಲ್ಲಿನ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದೂರ್ ಶಾಸ್ತ್ರಿ ಅವರ ಜಯಂತಿ ಆಚರಣೆ ಕಡಬ ತಾಲೂಕು ಆಡಳಿತ ಸೌಧದಲ್ಲಿ ಬುಧವಾರ ನಡೆಯಿತು.

ಕಡಬ ತಹಸೀಲ್ದಾರ್ ಪ್ರಭಾಕರ ಖಜೂರೆ ಅವರು ಗಾಂಧೀಜಿ ಹಾಗೂ ಲಾಲ್ ಬಹಾದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಶುಭಹಾರೈಸಿದರು. ಉಪತಹಸೀಲ್ದಾರ್ ಗೋಪಾಲ್ ಕಲ್ಲುಗುಡ್ಡೆ ಮಾತನಾಡಿದರು. ಉಪತಹಸೀಲ್ದಾರ್ ಶಾಯಿದುಲ್ಲಾ ಖಾನ್ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು. ಕಂದಾಯ ಇಲಾಖಾ ಸಿಬ್ಬಂದಿ ಕೌಶಿಕ್ ಕುಳ ಸ್ವಾಗತಿಸಿ, ವಂದಿಸಿದರು.