ಜಿಲ್ಲೆ

ಕುಳೂರು ಶಾಲೆಯಲ್ಲಿ ಸಂಭ್ರಮದ ಆಚರಣೆ

Avinash R

ಕಾಸರಗೋಡು: ಮಂಜೇಶ್ವರ ಕುಳೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕೇರಳದ ನಾಡ ಹಬ್ಬ ಓಣಂ ಆಚರಿಸಲಾಯಿತು. ನಿವೃತ್ತ ಮುಖ್ಯಶಿಕ್ಷಕ ಸತ್ಯನಾರಾಯಣ ಶರ್ಮ ಪಿ. ಉದ್ಘಾಟಿಸಿದರು. ಮಕ್ಕಳು ಹೂವಿನ ರಂಗೋಲಿ ರಚಿಸಿ ಸಂಭ್ರಮಿಸಿದರು.

ವಿಶೇಷ ಓಣಂ ಔತಣ ಕೂಟದ ಬಳಿಕ ಶಾಲಾ ಮಕ್ಕಳಿಗೆ, ಶಿಕ್ಷಕ ವೃಂದಕ್ಕೆ ಹಾಗೂ ಪಾಲಕರಿಗೆ ಮನರಂಜನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಾಲಾ ವ್ಯವಸ್ಥಾಪನಾ ಸಮಿತಿ ಸದಸ್ಯ ಜಯರಾಜ್ ಶೆಟ್ಟಿ ಚಾರ್ಲ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಹಾಜಿ ಕಂಚಿಲ, ಸದಸ್ಯ ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಅನುಪಮಾ ಚಿನಾಲ ಹಾಗೂ ರಕ್ಷಕ-ಶಿಕ್ಷಕ ಸಂಘದ ಸದಸ್ಯರು, ಮುಖ್ಯಶಿಕ್ಷಕಿ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.