ಸುಳ್ಯ: ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನ ಸ್ತ್ರೀ ಸಖಿ-2025 ಶನಿವಾರ ನಡೆಯಿತು.
ಎಒಎಲ್‌ಇ ಕಾರ್ಯದರ್ಶಿ ಡಾ.ಐಶ್ವರ್ಯ ಅಧ್ಯಕ್ಷತೆ ವಹಿಸಿದ್ದರು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ.ಕಾಲೇಜಿನ ಡೀನ್ ಡಾ.ನೀಲಾಂಬಿಕೈ ನಟರಾಜನ್ ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜಕಿ ಡಾ.ಅಪೂರ್ವ ದೊರೆ ಸ್ವಾಗತಿಸಿದರು. ಎನ್‌ಎಂಪಿಯು ಉಪನ್ಯಾಸಕಿ ಬೇಬಿ ವಿದ್ಯಾ ಮತ್ತು ಸವಿತಾ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಸಂಸ್ಥೆಗಳ ಪ್ರಾಂಶುಪಾಲರು, ಆಡಳಿತಾಧಿಕಾರಿಗಳು, ಉಪನ್ಯಾಸಕರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಕೆವಿಜಿ ದಂತ ವಿದ್ಯಾಲಯ: ಕೆವಿಜಿ ದಂತ ಮಹಾವಿದ್ಯಾಲಯದಲ್ಲಿ ಮಹಿಳಾ ದಿನ ಆಚರಿಸಲಾಯಿತು. ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಉಜ್ವಲ್ ಯು.ಜೆ. ಮಹಿಳೆಯರಿಗೆ ಸಮಾನತೆ ಹಾಗೂ ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರ ಜವಬ್ದಾರಿ ಬಗ್ಗೆ ಮಾತನಾಡಿದರು. ಸಂಸ್ಥೆ ಪ್ರಾಂಶುಪಾಲೆ ಡಾ.ಮೋಕ್ಷಾ ನಾಯಕ್ ಮಹಿಳೆಯರ ಸಮಾನತೆ ಹಾಗೂ ಪ್ರಾಮುಖ್ಯತೆ ಬಗ್ಗೆ ಮಾತನಾಡಿದರು. ಉಪಪ್ರಾಂಶುಪಾಲೆ ಡಾ.ಶೈಲಾ ಎಂ.ಪೈ ಶುಭಹಾರೈಸಿದರು. ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಹ ಸಂಯೋಜಕಿ ಡಾ.ರೋಹಿತ ತೋಮಸ್ ವಂದಿಸಿದರು.