ಜಿಲ್ಲೆ

ದೇಶದ ರಾಜಧಾನಿ ದೆಹಲಿಯಲ್ಲಿ ಅರಳಿದ ಕಮಲ...

ಪ್ರಶಾಂತ ಜಿ. ಭಾಗ್ವತ

ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ

ವಿಜಯವಾಣಿ ಸುದ್ದಿಜಾಲ ಉಡುಪಿ

ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ, 27 ವರ್ಷದ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿಯಲಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಶನಿವಾರ ಸಂಭ್ರಮ ಆಚರಿಸಲಾಯಿತು.

ಜಿಲ್ಲಾಧ್ಯಕ್ಷ ಕಿಶೋರ ಕುಮಾರ್​ ಕುಂದಾಪುರ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಕಾರ್ಯಕರ್ತರು ಸಂಭ್ರಮಿಸಿದರು.

ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ, ಉಡುಪಿ ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್​, ಉಡುಪಿ ನಗರಾಧ್ಯಕ್ಷ ದಿನೇಶ್​ ಅಮೀನ್​, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಟಿ.ಜಿ. ಹೆಗ್ಡೆ, ಜಿಲ್ಲಾ ಕಾರ್ಯದರ್ಶಿಗಳಾದ ರಾಘವೇಂದ್ರ ಕುಂದರ್​, ಶ್ರೀಕಾಂತ್​ ನಾಯಕ್​, ಅನಿತಾ ಶ್ರೀಧರ್​, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್​ ಅಂಬಲಪಾಡಿ, ಜಿಲ್ಲಾ ವಕ್ತಾರ ವಿಜಯಕುಮಾರ್​ ಉದ್ಯಾವರ, ಜಿಲ್ಲಾ ಮಾಧ್ಯಮ ಸಹ ಪ್ರಮುಖ್ ಗಿರೀಶ್ ಎಮ್. ಅಂಚನ್, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ದಿಲೇಶ್ ಶೆಟ್ಟಿ, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಎಸ್. ಕುಂದರ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ನಿಕಟಪೂರ್ವ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ನಗರಸಭೆ ಮಾಜಿ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ ಕಪ್ಪೆಟ್ಟು, ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು, ಎಸ್ಟಿ ಮೋರ್ಚಾ ಅಧ್ಯಕ್ಷೆ ಸುಮಾ ನಾಯ್ಕ್, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಡೇನಿಸ್ ಮಾಸ್ಕರೇನಸ್, ನಗರಸಭಾ ಸದಸ್ಯರಾದ ಹರೀಶ್ ಶೆಟ್ಟಿ ಅಂಬಲಪಾಡಿ, ಗಿರಿಧರ ಆಚಾರ್ಯ ಕರಂಬಳ್ಳಿ, ಅನಿಟಾ ಮಿಲಿಂಡ ಡಿಸೋಜಾ, ಉಡುಪಿ ನಗರ ಪದಾಧಿಕಾರಿಗಳಾದ ಗುರುರಾಜ್, ಜಯಕರ ಸನಿಲ್, ಸಂತೋಷ್ ಆಚಾರ್ಯ, ಕಿಶೋರ್ ಕರಂಬಳ್ಳಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ದೆಹಲಿಯಲ್ಲಿ ಭ್ರಷ್ಟ ಆಡಳಿತ ಅಂತ್ಯ

ಕಿಶೋರಕುಮಾರ್​ ಮಾತನಾಡಿ, 70 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 47 ಸ್ಥಾನಗಳಲ್ಲಿ ಗೆಲುವು ಸಾಧಿಸಿ, ಆಮ್​ ಆದ್ಮಿ ಪಾರ್ಟಿಯ ಭ್ರಷ್ಟ ಆಡಳಿತಕ್ಕೆ ಅಂತ್ಯ ಹಾಡಿದೆ. ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರು ಕೈಗೊಂಡಿದ್ದ ಭ್ರಷ್ಟಾಚಾರ ವಿರುದ್ಧದ ಹೋರಾಟದಲ್ಲಿ ಅರವಿಂದ ಕ್ರೇಜಿವಾಲ್​ ಭಾಗಿಯಾಗಿ, ರಾಜಕೀಯ ಮುನ್ನೆಲೆಗೆ ಬಂದು ಸಿಎಂ ಆದರು. ಗದ್ದುಗೆ ಏರಿದ ಬಳಿಕ ಭ್ರಷ್ಟಾಚಾರವನ್ನೇ ಉಸಿರಾಗಿಸಿಕೊಂಡು ಶೀಷ್​ ಮಹಲ್​, ಅಬಕಾರಿ ಹಗರಣಗಳಿಂದ ಜೈಲುವಾಸ ಅನುಭವಿಸಿದರೂ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡದೆ ಭ್ರಷ್ಟಾಚಾರ ಪೋಷಿಸುತ್ತ ಬಂದಿದ್ದರು. ಇದೀಗ ದೆಹಲಿ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಸುದೀರ್ಘ ಅವಧಿಗೆ ದೇಶವನ್ನಾಳಿದ ಕಾಂಗ್ರೆಸ್​ ಸತತ ಮೂರು ಬಾರಿ ಶೂನ್ಯ ಸಂಪಾದನೆ ಮಾಡಿರುವುದು ನಾಚಿಕೆಗೇಡು ಎಂದರು.
ಬಿಜೆಪಿ ಪ್ರಚಂಡ ಗೆಲುವು ನೀಡುವ ಮೂಲಕ ಆಮ್​ ಆದ್ಮಿ ಪಾರ್ಟಿ ಹಾಗೂ ಕಾಂಗ್ರೆಸ್​ನ ಹಿಂದು ವಿರೋಧಿ ನಿಲುವಿಗೆ ದೆಹಲಿ ಜನತೆ ದಿಟ್ಟ ಉತ್ತರ ನೀಡಿದೆ. ಹಿಂದುಗಳ ಪವಿತ್ರ ಕುಂಭಮೇಳದ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಹಾಗೂ ಅರವಿಂದ ಕೇಜ್ರಿವಾಲ್​ ಅವಹೇಳನಕಾರಿಯಾಗಿ ಮಾತನಾಡಿದ್ದಕ್ಕೆ ತಕ್ಕ ಶಾಸ್ತಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತ ನಿಮಾರ್ಣಕ್ಕೆ ದೆಹಲಿಯ ಗೆಲುವು ಹೊಸ ಚೈತನ್ಯ ತುಂಬಿದೆ. | ಯಶ್​ಪಾಲ್​ ಸುವರ್ಣ, ಶಾಸಕ