ಜಿಲ್ಲೆ

ಮಹಿಳಾ ಸಬಲೀಕರಣಕ್ಕೆ ಪ್ರಧಾನಿ ಮೋದಿ ಒತ್ತು...

ಪ್ರಶಾಂತ ಜಿ. ಭಾಗ್ವತ

ಉಡುಪಿ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್​ ಸಂತಸ

ಬಿಜೆಪಿ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ವಿಜಯವಾಣಿ ಸುದ್ದಿಜಾಲ ಉಡುಪಿ

ದೆಹಲಿಯ ಮುಖ್ಯಮಂತ್ರಿಯಾಗಿ ಬಿಜೆಪಿಯ ರೇಖಾ ಗುಪ್ತಾ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕಡಿಯಾಳಿಯಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಶುಕ್ರವಾರ ಸಂಭ್ರಮ ಆಚರಿಸಲಾಯಿತು.

ರಸ್ತೆಯಲ್ಲಿ ಪಟಾಕಿ ಸಿಡಿಸಿ, ಸಿಹಿ ವಿತರಿಸುವ ಮೂಲಕ ಮಹಿಳಾ ಪದಾಧಿಕಾರಿಗಳು ಸಂತಸ ವ್ಯಕ್ತಪಡಿಸಿದರು.

ಮಹಿಳೆಗೆ ಆಡಳಿತದ ಅವಕಾಶ

ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್​ ಮಾತನಾಡಿ, 27 ವರ್ಷದ ಬಳಿಕ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದೆ. ಮೊದಲ ಬಾರಿ ಸ್ಪರ್ಧಿಸಿ ಗೆಲುವು ಸಾಧಿಸಿದ ಶಾಸಕಿ ರೇಖಾ ಗುಪ್ತಾ ಅವರನ್ನು ರಾಷ್ಟ್ರ ರಾಜಧಾನಿಯ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿರುವುದು ಸಂತಸ ತಂದಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಅನೇಕ ಘಟಾನುಘಟಿ ಸಮರ್ಥ ಶಾಸಕರಿದ್ದರೂ ಮಹಿಳೆಗೆ ದೆಹಲಿಯ ಆಡಳಿತದ ಚುಕ್ಕಾಣಿ ನೀಡಲಾಗಿದೆ. ಈ ಅವಕಾಶ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದಂತಾಗಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್​ ಷಾ, ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಎಲ್ಲ ಮಹಿಳೆಯರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಉಡುಪಿ ನಗರಸಭಾ ಉಪಾಧ್ಯಕ್ಷೆ ರಜನಿ ಹೆಬ್ಬಾರ್​, ಜಿಲ್ಲಾ ಮಹಿಳಾ ಮೋರ್ಚಾದ ಸುಜಾಲಾ ಸತೀಶ್​, ತಾರಾ ಆಚಾರ್ಯ, ವಿದ್ಯಾ ಶ್ಯಾಮ್​, ಸುಮಾ ಆರ್​. ಕುಮಾರ್​, ಲೀಲಾ ಆರ್​. ಅಮೀನ್​, ಕವಿತಾ ಪೂಜಾರಿ, ಲೀನಾ, ನಗರ ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಸುಧಾ ಪೈ, ಯಶೋದಾ ರಾಜೇಂದ್ರ, ಸರೋಜಾ ಶೆಣೈ, ಆಶಾಲತಾ ಹೆಗ್ಡೆ, ದೀಪಾ ಪೈ, ಪ್ರಜ್ಞಾ ಶೆಟ್ಟಿ ಇತರರಿದ್ದರು.