ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮಹಾಲಿಂಗಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಪುರಸಭೆ ಅಧ್ಯಕ್ಷ ಯಲ್ಲನಗೌಡ ಪಾಟೀಲ, ಮಾಜಿ ಅಧ್ಯಕ್ಷ ಬಸವರಾಜ ರಾಯರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಪ್ಪ ಸಿಂಗಾಡಿ ಮುಖಂಡರಾದ ಈಶ್ವರ ಚಮಕೇರಿ, ಬಲವಂತಗೌಡ ಪಾಟೀಲ ಇತರರಿದ್ದರು. 
ಜಿಲ್ಲೆ

ಮಹಾಲಿಂಗಪುರದಲ್ಲಿ ಸಂಭ್ರಮ

ಮಹಾಲಿಂಗಪುರ: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ್ದಕ್ಕೆ ಹರ್ಷಗೊಂಡು ಕುಣಿದು ಕುಪ್ಪಳಿಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಶನಿವಾರ ಪಟ್ಟಣದ ರಾಣಿ ಚನ್ನಮ್ಮ ವೃತ್ತ, ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ ಜಯಘೋಷ ಕೂಗಿ ಸಂಭ್ರಮಿಸಿದರು.

ತೇರದಾಳ ಮತಕ್ಷೇತ್ರದ ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರ ಈ ಗೆಲುವು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷದ ಆಡಳಿತಕ್ಕೆ ಜನಮನ್ನಣೆ ನೀಡಿದಂತಾಗಿದೆ. ಕಾಂಗ್ರೆಸ್ ಸರ್ಕಾರಕ್ಕೆ ಜನತೆ ಜೈ ಎಂದಿದ್ದಾರೆ. ನಮ್ಮ ಪಕ್ಷದ ವಿರುದ್ಧ ಸದಾ ಸುಳ್ಳು ಸುದ್ದಿಗಳನ್ನು ಹರಡುತ್ತ ಬಡವರಿಗಾಗಿ ಕಾಂಗ್ರೆಸ್ ಪಕ್ಷ ಹಾಕಿಕೊಂಡ ಜನಪ್ರಿಯ ಕಾರ್ಯಕ್ರಮಗಳ ಕುರಿತು ಅಪಪ್ರಚಾರ ಮಾಡುತ್ತಿದ್ದ ವಿರೋಧ ಪಕ್ಷಗಳಿಗೆ ಮತದಾರ ತಕ್ಕ ಶಾಸ್ತಿ ಮಾಡಿದ್ದಾನೆ. ಇನ್ನು ಮುಂದಾದರೂ ನಮ್ಮ ಪಕ್ಷದ ವಿರುದ್ಧ ಸುಳ್ಳು ಸುದ್ದಿ ಹರಡುವುದನ್ನು ನಿಲ್ಲಿಸಲಿ ಎಂದರು.

ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಕಾಂಗ್ರೆಸ್ ಪಕ್ಷದ ಪರ ಜಯಘೋಷ ಕೂಗಿದರು.

ಪುರಸಭೆ ಅಧ್ಯಕ್ಷ ಯಲ್ಲನಗೌಡ ಪಾಟೀಲ, ಮಾಜಿ ಅಧ್ಯಕ್ಷ ಬಸವರಾಜ ರಾಯರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಪ್ಪ ಸಿಂಗಾಡಿ ಮುಖಂಡರಾದ ಈಶ್ವರ ಚಮಕೇರಿ, ಬಲವಂತಗೌಡ ಪಾಟೀಲ, ರಂಗನಗೌಡ ಪಾಟೀಲ, ಸುನಿಲಗೌಡ ಪಾಟೀಲ, ವಿಠ್ಠಲ ಹೊಸಮನಿ, ಚನ್ನು ದೇಸಾಯಿ, ಪ್ರಕಾಶ ಮಮದಾಪೂರ, ಲಕ್ಷ್ಮಣ ಮಾಂಗ, ಮಹಾಲಿಂಗ ಮಾಳಿ, ವಿನೋದ ಶಿಂಪಿ, ಅನಿಲ ದೇಸಾಯಿ, ಮಹಾಲಿಂಗ ಪಾಟೀಲ, ಆನಂದ ಬಂಡಿ, ಸಿರಾಜ ಪೆಂಡಾರಿ, ನಜೀರ್ ಝಾರೆ ಇತರರಿದ್ದರು.