ಹುಬ್ಬಳ್ಳಿ: ಇಲ್ಲಿಯ ಚಿನ್ಮಯ ಪದವಿ ಹಾಗೂ ಪದವಿ ಪೂರ್ವ ವಿದ್ಯಾಲಯದಲ್ಲಿ ಮಂಗಳವಾರ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.
ವಿದ್ಯಾರ್ಥಿ ಪ್ರದ್ಯುಮ್ನ ಬೆಳಗ್ಗೆ ಪೂಜಾ ವಿಧಿವಿಧಾನ ನೆರವೇರಿಸಿದರು. ನಂತರ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಂದ ಸಂಗೀತ ಸೇವೆ ಜರುಗಿತು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ವಿದ್ಯಾರ್ಥಿಗಳು ಕೃಷ್ಣ ಹಾಗೂ ರಾಧೆಯ ವೇಷ ತೊಟ್ಟು ಗಮನ ಸೆಳೆದರು.
ವಿದ್ಯಾರ್ಥಿಗಳು ಪಿರಾಮಿಡ್ ರಚನೆ ಮೂಲಕ ಮೊಸರು ಗಡಿಗೆ ಒಡೆದರು. ಪ್ರಾಚಾರ್ಯ ವಿನಾಯಕ ಬಿ.ಕೆ., ಪ್ರೊ. ಷಣ್ಮುಖ ಕೋಳೂರ ಇತರರು ಉಪಸ್ಥಿತರಿದ್ದರು. ನಂತರ ಪ್ರಸಾದ ವಿತರಣೆ ಕಾರ್ಯಕ್ರಮ ನಡೆಯಿತು.