ಪಟ್ಟಣದ ಶ್ರೀ ಜಯ ಚಾಮರಾಜೇಂದ್ರ ವೃತ್ತ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ವಿಜಯೋತ್ಸವ ಆಚರಿಸಿದರು. 
ಜಿಲ್ಲೆ

ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಲೋಕೇಶ್ ಮನು. ಡಿ

ಹೊಳೆನರಸೀಪುರ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸೇರಿದಂತೆ ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕಿ ಪ್ರಿಯಾಂಕಾ ಗಾಂಧಿ ಭರ್ಜರಿಯಾಗಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಪಟ್ಟಣದ ಶ್ರೀ ಜಯ ಚಾಮರಾಜೇಂದ್ರ ವೃತ್ತ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಟಿ.ಲಕ್ಷ್ಮಣ, ಪುರಸಭೆ ಮಾಜಿ ಅಧ್ಯಕ್ಷ ಪುಟ್ಟರಾಜು, ಹಾಲಿ ಸದಸ್ಯ ಬೈರಶೆಟ್ಟಿ, ಮುಖಂಡರಾದ ರಂಗಸ್ವಾಮಿ, ಉಮೇಶ್, ಗ್ಯಾರಂಟಿ ಅನುಷ್ಠಾನ ಸಮಿತಿಯ ಪ್ರಸನ್ನ ಕುಮಾರ್, ಗೋವಿಂದರಾಜು, ನೂರಾರು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು.