ಜಿಲ್ಲೆ

ಸಿಮೆಂಟ್ ಕಾರ್ಖಾನೆ ಕಿರುಕುಳ ತಾಳದೆ ಮ್ಯಾನೇಜರ್ ಆತ್ಮಹತ್ಯೆ

ಕಲಬುರಗಿ: ಜಿಲ್ಲೆಯ ಚಿತ್ತಾಪೂರ ತಾಲೂಕಿನ ವಾಡಿ ಎಸಿಸಿ ಸಿಮೆಂಟ್ ಕಾರ್ಖಾನೆಯ ಡೆಪ್ಯೂಟಿ ಮ್ಯಾನೇಜರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ರಮೇಶ ಪವಾರ (47) ಆತ್ಮಹತ್ಯೆ ಮಾಡಿಕೊಂಡ ಎಸಿಸಿ ಕಾರ್ಖಾನೆ ಡೆಪ್ಯೂಟಿ ಮ್ಯಾನೇಜರ್.

ಅದಾನಿ ಗ್ರೂಪ್ ಮಾಲಿಕತ್ವದಲ್ಲಿರುವ ಎಸಿಸಿ ಸಿಮೆಂಟ್ ಕಾರ್ಖಾನೆ. ಕಾರ್ಖಾನೆಯ ಆಡಳಿತ ಮಂಡಳಿಯವರ ಕಿರುಕುಳಕ್ಕೆ ಬೇಸತ್ತು ಡೆಪ್ಯೂಟಿ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಎಸಿಸಿ ಕಾಲನಿಯ ಮನೆಯಲ್ಲಿಯೇ ನೇಣು ಬಿಗುದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೂ ಮುನ್ನ ಕಾರ್ಖಾನೆ ಹಿರಿಯ ಅಧಿಕಾರಿಗಳ ಮೇಲೆ ಆರೋಪದ ವಿಡಿಯೋ ಮಾಡಿಟ್ಟಿರುವ ರಮೇಶ ಪವಾರ್. ಮೃತ ರಮೇಶ ಪವಾರ್ ಚಿತ್ತಾಪೂರದ ಮಾಜಿ ಶಾಸಕ ದಿ.ವಾಲ್ಮಿಕಿ ನಾಯಕ್ ಅವರ ಅಳಿಯನಾಗಿದ್ದಾರೆ.

ವಾಡಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ, ಪರೀಶೀಲಿಸಿದ್ದಾರೆ. ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.