ಜಿಲ್ಲೆ

ಸಮೀಕ್ಷೆ ದ.ಕ.ಜಿಲ್ಲೆಯಲ್ಲಿ ಶೇ.63.41 ಪ್ರಗತಿ : ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಮಾಹಿತಿ

Mangaluru - Hariprasad Rai



ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸೋಮವಾರ ಮಧ್ಯಾಹ್ನದವರೆಗೆ ಶೇ.63.41 ಪ್ರಗತಿಯಾಗಿದೆ ಎಂದು ನೀಡಿದ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಮಾಹಿತಿ ನೀಡಿದರು.
ಶಾಲಾ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು ‘ ಜಿಲ್ಲೆಯಲ್ಲಿ 5,86,134 ಮನೆಗಳ ಸಮೀಕ್ಷೆ ನಿಗದಿಪಡಿಸಲಾಗಿದೆ. ಈ ಪೈಕಿ 3,71,694 ಮನೆಗಳ ಸಮೀಕ್ಷೆ ಸೋಮವಾರ ಮಧ್ಯಾಹ್ನದವರೆಗೆ ಪೂರ್ಣಗೊಂಡಿದೆ’ಎಂದರು.
ಸಮೀಕ್ಷೆಗೆ ಅ.7ರವರೆಗೆ ಸಮಯಾವಕಾಶವಿದ್ದು, ಇನ್ನಷ್ಟು ಪ್ರಗತಿ ಸಾಧಿಸುವ ವಿಶ್ವಾಸವಿದೆ . ಸುಳ್ಯ ತಾಲೂಕಿನಲ್ಲಿ ಶೇ.100 ರಷ್ಟು ಸಮೀಕ್ಷೆ ಕಾರ್ಯ ಮುಗಿದಿದೆ. ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿ 1,09,151 ಮನೆಗಳ ಸಮೀಕ್ಷೆ ಮುಗಿದಿದೆ ಎಂದು ಅವರು ತಿಳಿಸಿದರು.
ಸಚಿವ ಎಸ್.ಮಧು ಬಂಗಾರಪ್ಪ ಮಾತನಾಡಿ ಸಮೀಕ್ಷೆ ನಡೆಸುವಾಗ ಕ್ಷೇತ್ರ ಮಟ್ಟದಲ್ಲಿ ಹಲವು ಸಮಸ್ಯೆಗಳಿದ್ದರೂ ಶಿಕ್ಷಕರು
ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ದಸರಾ ಸಮಯದಲ್ಲಿಯೂ ಕಾರ್ಯನಿರ್ವಹಿಸುವ ಮೂಲಕ ಶ್ಲಾಘನೀಯ ಸೇವೆ ಮಾಡಿದ್ದಾರೆ. ಸಮೀಕ್ಷೆಗೆ ಶಾಲಾ ಶಿಕ್ಷಣ ಇಲಾಖೆಯು ಅತ್ಯಧಿಕ ಮಾನವ ಸಂಪನ್ಮೂಲವನ್ನು ಒದಗಿಸಿದೆ ಎಂದರು.
ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ , ಮಂಜುನಾಥ ಭಂಡಾರಿ, ಹಿಂದುಳಿದ ವರ್ಗ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ, ಉಪವಿಭಾಗಾಧಿಕಾರಿ ಮೀನಾಕ್ಷಿ
ಆರ್ಯ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಶಿಧರ್ ಉಪಸ್ಥಿತರಿದ್ದರು.