ರಾಯಚೂರು ಯಾದವ ಸಂಘದ ಶತಮಾನೋತ್ಸವ ಹಾಗೂ ಶ್ರೀ ಕೃಷ್ಣ ಯಾದವಾನಂದ ಸ್ವಾಮೀಗಳ ೧೬ನೇ ವರ್ಷದ ಪಟ್ಟಾಭಿಷೇಕ ಕಾರ್ಯಕ್ರಮವನ್ನು ಏ.೨೦ ರಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆಂದು ಜಿಲ್ಲಾ ಯಾದವ ಸಮಾಜದ ಅಧ್ಯಕ್ಷ ಹನುಮಂತಪ್ಪ ಯಾದವ ಹೇಳಿದರು.
ನಗರ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,ಯಾದವ ಸಂಘ ೧೯೨೪ ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು, ನೂರು ವರ್ಷಗಳನ್ನು ಪೂರೈಸಿದೆ. ಸಮಾಜದ ನಾಯಕ ಬಿ.ಕೃಷ್ಣಪ್ಪ ಇವರು ಜಿಲ್ಲಾ ಮತ್ತು ತಾಲೂಕ ಮಟ್ಟದಲ್ಲಿ ಯಾದವ ಸಂಘ ಸ್ಥಾಪಿಸಿ ವಸತಿ ನಿಲಯಗಳನ್ನು ಸ್ಥಾಪಿಸಿರುವ ಹಿರಿಮೆ ಅವರಿಗೆ ಸಲ್ಲುತ್ತದೆ. ೧೬ ಜಿಲ್ಲೆಗಳಲ್ಲಿ ವಿದ್ಯಾರ್ಥಿ ನಿಲಯಗಳು, ೩೦ ತಾಲೂಕಗಳಲ್ಲಿ ಸಮೂದಾಯ ಭವನಗಳನ್ನು ನಿರ್ಮಿಸಿಕೊಟ್ಟಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ರಸ್ತೆಯಲ್ಲಿ ಐದು ಎಕರೆ ವಿಸ್ತೀರ್ಣ ಯಾದವ ಮಠ ಸ್ಥಾಪಿಸಲಾಗಿದೆ. ಅಂದು ಶ್ರೀ ಕೃಷ್ಣ ಯಾದವಾನಂದ ಸ್ವಾಮೀಗಳ ಪಟ್ಟಾಭಿಷೇಕ ಮಹೋತ್ಸವ ನಡೆಯಲಿದೆ.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವುಕುಮಾರ ಸೇರಿದಂತೆ ಅನೇಕ ಸಚಿವರುಗಳು, ರಾಜಕೀಯಪಕ್ಷಗಳ ನಾಯಕರು ಭಾಗಿಯಾಗಲಿದ್ದಾರೆಂದರು.
ಈ ಸಂದರ್ಭದಲ್ಲಿ ಶಿವುಕುಮಾರ ಯಾದವ, ರಮೇಶ ಯಾದವ, ಚಂದ್ರಶೇಖರ ಯಾದವ, ಲಕ್ಷ÷್ಮಣ ಯಾದವ ಇದ್ದರು.