ಬೆಳಗಾವಿ: ವಸತಿ ನಿಲಯದ ವಿದ್ಯಾರ್ಥಿಗಳಿಗಾಗಿ ಮಿಷನ್ ವಿದ್ಯಾಪುರ, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗಾಗಿ ಟಾಪರ್ ಟೂರ್, ಚುನಾವಣೆ ಕಾರ್ಯ ನಿರ್ವಹಣೆಗಾಗಿ ರಾಜ್ಯಮಟ್ಟದ ಪ್ರಶಸ್ತಿ ಪಡೆದು ದಕ್ಷ ಅಧಿಕಾರಿ ಎನ್ನಿಸಿಕೊಂಡಿದ್ದ ಐಎಎಸ್ ಅಧಿಕಾರಿ ರಾಹುಲ್ ಶಿಂಧೆ ಇದೀಗ ಬೆಳಗಾವಿ ಜಿಪಂ ಸಿಇಒ ಆಗಿ ವರ್ಗಾವಣೆಗೊಂಡಿದ್ದಾರೆ.
ಶುಕ್ರವಾರ ರಾಜ್ಯದ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ವರ್ಗಾವಣೆ ಮಾಡಿರುವ ಸರ್ಕಾರ ಸಿಇಒ ರಾಹುಲ್ ಶಿಂಧೆ ಅವರನ್ನು ಬೆಳಗಾವಿ ಜಿಲ್ಲಾ ಪಂಚಾಯಿತಿಗೆ ವರ್ಗಾವಣೆ ಮಾಡಿ ಆದೇಶಿಸಿದೆ