ಬೆಳಗಾವಿ; ಬೈಲಹೊಂಗಲ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕೊಠಡಿಗಳನ್ನು ಜಿಪಂ ಸಿಇಒ ರಾಹುಲ್ ಶಿಂಧೆ ರವರು ಉದ್ಘಾಟಿಸಿದರು.
ಸಮಾರಂಭದ ಉದ್ಘಾಟಕರಾಗಿ ಮಾತನಾಡಿದ ಜಿಪಂ ಸಿಇಒ ರಾಹುಲ್ ಶಿಂಧೆ ಅವರು ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಸಿಇಟಿ ಮತ್ತು ನೀಟ್ ಪರೀಕ್ಷೆಗಳನ್ನು ಅತ್ಯಂತ ಯಶಸ್ವಿಯಾಗಿ ಆತ್ಮವಿಶ್ವಾಸದಿಂದ ಎದುರಿಸಬೇಕು ಅದಕ್ಕಾಗಿ ನಿಮಗೆ ಜಿಲ್ಲಾ ಪಂಚಾಯತಿವತಿಯಿಂದ ಅತ್ಯುತ್ತಮ ತರಬೇತಿಯನ್ನು ಪ್ರತಿ ಶನಿವಾರ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುವುದರ ಮುಖಾಂತರ ಭಾವಿ ಪರೀಕ್ಷೆಗೆ ತಯಾರಿ ಮಾಡಲಾಗುತ್ತಿದೆ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಯಶಸ್ವಿಯಾಗಿ ಎದುರಿಸಿ ನಿಮ್ಮ ಭವಿಷ್ಯವನ್ನು ಸುಂದರವಾಗಿ ರೂಪಿಸಿಕೊಳ್ಳಿ ಎಂದು ಕರೆ ನೀಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೈಲಹೊಂಗಲ ಕ್ಷೇತ್ರದ ಶಾಸಕರಾದ ಮಹಾಂತೇಶ್ ಎಸ್. ಕೌಜಲಗಿ ಸರಕಾರದ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಂಡು ಈ ಒಂದು ಸಿಇಟಿ ಮತ್ತು ನೀಟ್ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಅತ್ಯಂತ ಪರಿಶ್ರಮದಿಂದ ಅಧ್ಯಯನ ಮಾಡಿ ಯಶಸ್ವಿಯಾಗಿ ನಿಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಿ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾದ ರಾಹುಲ್ ಶಿಂಧೆ ಅವರ ಪ್ರಯತ್ನವನ್ನು ವಿದ್ಯಾರ್ಥಿಗಳು ಸಾರ್ಥಕಪಡಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ವಿದ್ಯಾರ್ಥಿನಿ ಅನುಶ್ರೀ ಬಿಜ್ಜಣ್ಣವರ ಮಾತನಾಡಿ ಜಿಲ್ಲಾ ಪಂಚಾಯತಿವತಿಯಿಂದ ನಡೆಸುವ ಸಿಇಟಿ ಮತ್ತು ನೀಟ್ ತರಬೇತಿ ಪರೀಕ್ಷೆಗಳು ಅತ್ಯಂತ ಪೂರಕವಾಗಿವೆ ಅವುಗಳನ್ನು ಎಲ್ಲ ವಿದ್ಯಾರ್ಥಿಗಳು ಸದುಪಯೋಗ ಮಾಡಿಕೊಳ್ಳುವುದು ಹಾಗೂ ಇಂತಹ ಪರೀಕ್ಷೆಗಳು ವಿದ್ಯಾರ್ಥಿ/ವಿದ್ಯಾರ್ಥಿನಿಯರ ಭವಿಷ್ಯವನ್ನು ರೂಪಿಸಿಕೊಳ್ಳುವಲ್ಲಿ ಬಹಳ ಸಹಕಾರಿ ಆಗಿವೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಾರ್ಯಪಾಕ ಅಭಿಯಂತರರು ಎಸ್.ಬಿ.ಕೋಳಿ(ಪಂಚಾಯತರಾಜ್) ಬೆಳಗಾವಿ ವಿಭಾಗ, ಪ್ರಾಚಾರ್ಯರಾದ ಶ್ರೀ ಬಿ ಎಮ್ ಕೊಳವಿ, ಉಪಾಧ್ಯಕ್ಷರು ಕಾಲೇಜು ಅಭಿವೃದ್ಧಿ ಸಮಿತಿ ಅಶೋಕ ವಾಲಿ, ಕಾಲೇಜು ಅಭಿವೃದ್ಧಿ ಸಮಿತಿ ಎಲ್ಲ ಸದಸ್ಯರು, ಕಾಲೇಜಿನ ಎಲ್ಲ ಉಪನ್ಯಾಸಕರು ಹಾಗೂ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.