ಬೆಳಗಾವಿ: ಹಳ್ಳಿಗಳಲ್ಲಿನ ಪ್ರತಿ ಕುಟುಂಬಕ್ಕೆ ಶುದ್ದವಾದ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ತಾಪಂ, ಗ್ರಾಪಂ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಜಿಪಂ ಸಿಇಒ ರಾಹುಲ ಶಿಂಧೆ ಸೂಚಿಸಿದರು.
ಬೆಳಗಾವಿ ತಾಲೂಕಿನ ಹಲಗಾ ಹಾಗೂ ಬಸ್ತವಾಡ ಗ್ರಾಮ ಪಂಚಾಯತಿಗೆ ಸೋಮವಾರ ಭೇಟಿ ನೀಡಿ, ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗಯನ್ನು ಪರಿಶೀಲಿಸಿದ ಬಳಿಕ ಅವರು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಕುಡಿಯುವ ನೀರು ಪೂರೈಕೆ ಮಾಡುವ ನೀರಿನ ಮೂಲಗಳ ಸ್ವಚ್ಛತೆಗೆ ಆದ್ಯತೆ ಕೊಡಬೇಕು. ಮೇಲಿಂದ ಮೇಲೆ ಕುಡಿಯುವ ನೀರಿನ ಗುಣಮಟ್ಟ ಪರಿಶೀಲನೆ ನಡೆಸಬೇಕು. ಜೆಜೆಎಂ ಯೋಜನೆ ಅಡಿ ಕೈಗೊಂಡಿರುವ ಕಾಮಗಾರಿ ಗುಣಮಟ್ಟಪರಿಶೀಲನೆ ನಡೆಸಬೇಕು.ನಳಗಳ ಸಂಪರ್ಕದ ಕುರಿತುಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.ಗ್ರಾಮದಲ್ಲಿನ ಕುಡಿಯುವ ನೀರಿನ ಮೂಲಗಳ ಸ್ವಚ್ಛತೆಗೆ ಹೆಚ್ಚಿನ ಗಮನ ನೀಡಬೇಕೆಂದು ತಿಳಿಸಿ, ನೀರಿನ ಟ್ಯಾಂಕಗಳ ಸ್ವಚ್ಛತೆ ಬಗ್ಗೆ ಹೆಚ್ಚು ಗಮನ ವಹಿಸಿ ಹಾಗೂ ಜಲ ಜೀವನ ಮಿಷನ್ ಯೋಜನೆಯಡಿ ಬಾಕಿ ಉಳಿದ ಗ್ರಾಮಗಳ ಕಾಮಗಾರಿಗಳನ್ನು ಅತೀ ಶೀಘ್ರದಲ್ಲಿ ಪೂರ್ಣಗೊಳಿಸಿ ಜನರಿಗೆ ನಳ ಸಂಪರ್ಕ ಒದಗಿಸಿ ನೀರು ಕೊಡಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ನಿರ್ದೇಶನ ನೀಡಿದರು.
ಬಸ್ಥವಾಡ ಗ್ರಾಮ ಪಂಚಾಯಿತಿಯ ಕೊಂಡಸ್ಕೊಪ್ಪ ಗ್ರಾಮಕ್ಕೆ ಭೇಟಿ ನೀಡಿ ಕಾರ್ಯಾತ್ಮಕ ನಳ ಸಂಪರ್ಕ ನೀಡಿರುವ ಕುರಿತು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು ನಂತರ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಸಹಾಯಕ ಇಂಜಿನಿಯರ್ ಮಾತನಾಡಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿ ಈ ಗ್ರಾಮವನ್ನು ತೆಗೆದುಕೊಳ್ಳಲಾಗಿದೆ ಎಂಬ ಮಾಹಿತಿಯನ್ನು ನೀಡಿದರು
ಬೆಳಗಾವಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಯಶವಂತಕುಮಾರ, ಇಇ ಕಿರಣ ಗೊರ್ಪಡೆ, ಎಇಇ ಎಸ್. ಎಫ್. ಶಿವಾಪೂರ, , ಇತರ ಎಇ, ಡಿ ಪಿ ಎಂ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಗ್ರಾಮ ಪಂಚಾಯತ ಅಧ್ಯಕ್ಷರು, ಸದಸ್ಯರು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಇತರರಿದ್ದರು.