ವಿಜಯವಾಣಿ ಸುದ್ದಿಜಾಲ ಧಾರವಾಡ
ದ್ವೀತಿಯ ಪಿಯುಸಿ ಪರೀಕ್ಷೆ ಸುಗಮವಾಗಿ ನಡೆಯುತ್ತಿರುವ ಬಗ್ಗೆ ನಗರದ ಕಿಟಲ್ ವಿಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ಆರ್ಎಲ್ಎಸ್ ಪದವಿ ಪೂರ್ವ ಕಾಲೇಜುಗಳಿಗೆ ಸೋಮವಾರ ಜಿಪಂ ಸಿಇಒ ಭುವನೇಶ ಪಾಟೀಲ ಭೇಟಿ ನೀಡಿ ಪರಿಶೀಲಿಸಿದರು.
ಪರೀಕ್ಷಾ ಪ್ರಕ್ರಿಯೆ ನಿರ್ವಹಣೆಗೆ ನಿಯೋಜಿತ ಅಧಿಕಾರಿ, ಸಿಬ್ಬಂದಿಗೆ ಪರೀಕ್ಷಾ ಮಂಡಳಿ ಮಾರ್ಗಸೂಚಿಗಳನ್ವಯ ಕಾರ್ಯನಿರ್ವಹಿಸುತ್ತಿರುವುದನ್ನು ವೀಕ್ಷಿಸಿದರು. ಪರೀಕ್ಷೆಗಳ ಕುರಿತಾಗಿ ನಿಯೋಜಿತ ಪರೀಕ್ಷಾ ಅಧಿಕಾರಿ, ಸಿಬ್ಬಂದಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡರು.
ಹಾಜರಾತಿ: ದ್ವೀತಿಯ ಪಿಯು ಗಣಿತ ಪರೀಕ್ಷೆಗೆ ಒಟ್ಟು 12,755 ವಿದ್ಯಾರ್ಥಿಗಳು ನೋಂದಾಯಿಸಿದ್ದು, 12755 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 83 ವಿದ್ಯಾರ್ಥಿಗಳು ಗೈರಾಗಿದ್ದಾರೆ. ವ್ಯವಹಾರ ಅಧ್ಯಯನ ಪರೀಕ್ಷೆಗೆ ಒಟ್ಟು 7,493 ವಿದ್ಯಾರ್ಥಿಗಳು ನೋಂದಾಯಿಸಿದ್ದು, 7,289 ವಿದ್ಯಾರ್ಥಿಗಳು ಹಾಜರಾಗಿದ್ದರು. 204 ಗೈರಾಗಿದ್ದಾರೆ. ಶಿಕ್ಷಣಶಾಸ್ತ್ರ ಪರೀಕ್ಷೆಗೆ 1,299 ವಿದ್ಯಾರ್ಥಿಗಳು ನೋಂದಾಯಿಸಿದ್ದು, 1,253 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 46 ವಿದ್ಯಾರ್ಥಿಗಳು ಗೈರಾಗಿದ್ದಾರೆ.