ಜಿಲ್ಲೆ

ಅಂತಾರಾಷ್ಟ್ರೀಯ ಮಟ್ಟದ ಸಾವಯವ ಮೇಳ: ಡಿ.12ರಂದು ಸಿರಿಧಾನ್ಯ ಪಾಕ ಸ್ಪರ್ಧೆ

ಕೆ.ಎನ್.ರಾಘವೇಂದ್ರ

ಮಂಡ್ಯ: ಅಂತಾರಾಷ್ಟ್ರೀಯ ಮಟ್ಟದ ಸಿರಿಧಾನ್ಯ ಸಾವಯವ ಮೇಳದ ಅಂಗವಾಗಿ ಡಿ.12ರಂದು ಕೃಷಿ ಇಲಾಖೆಯಿಂದ ಜಿಲ್ಲಾಮಟ್ಟದಲ್ಲಿ ಸಿರಿಧಾನ್ಯ ಪಾಕ ಸ್ಪರ್ಧೆ ಆಯೋಜಿಸಲಾಗಿದೆ.

ಇಲಾಖೆಯ ಅಧಿಕಾರಿ, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳನ್ನು ಹೊರತುಪಡಿಸಿ ಜಿಲ್ಲೆಯ ಎಲ್ಲ ಸಾರ್ವಜನಿಕರಿಗೆ ಭಾಗವಹಿಸಲು ಅವಕಾಶವಿದೆ. ಆಸಕ್ತರು ತಮ್ಮ ಭಾವಚಿತ್ರದೊಂದಿಗೆ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ಮತ್ತು ಪ್ರದರ್ಶಿಸುವ ಸಿರಿಧಾನ್ಯ ತಿನಿಸಿನ ಸಂಕ್ಷಿಪ್ತ ಮಾಹಿತಿಯೊಂದಿಗೆ ಅರ್ಜಿಯನ್ನು ಡಿ.11ರಂದು ಸಂಜೆ 5.30ರೊಳಗೆ ಇ ಮೇಲ್ ವಿಳಾಸ jdamandya@yahoo.com ಅಥವಾ ಖುದ್ದಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಡಾ.ವಿ.ಎಸ್.ಆಶೋಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.