ಜಿಲ್ಲೆ

ವಿವಿ ವಿದ್ಯಾರ್ಥಿ ಪರಿಷತ್‌ ಉದ್ಘಾಟನೆಗೆ ಕಲ್ಲಡ್ಕ ಪ್ರಭಾಕರ ಭಟ್‌; ಸಿಎಫ್‌ಐ ನಿಂದ ಪ್ರತಿಭಟನೆ, ಮುತ್ತಿಗೆ ಯತ್ನ

reportermng

ಮಂಗಳೂರು: ವಿಶ್ವವಿದ್ಯಾಲಯದ ವಿದ್ಯಾರ್ಥಿ ಪರಿಷತ್‌ ಉದ್ಘಾಟನೆಗೆ ಆರ್‌ಎಸ್‌ಎಸ್‌ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್‌ ಅವರನ್ನು ಆಹ್ವಾನಿಸಿದ್ದನ್ನು ವಿರೋಧಿಸಿ, ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ ಕಾರ್ಯಕರ್ತರು ಬುಧವಾರ ವಿವಿ ಕ್ಯಾಂಪಸ್‌ ಪ್ರವೇದ್ವಾರದಲ್ಲಿ ಪ್ರತಿಭಟನೆ ನಡೆಸಿ, ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಪ್ರತಿಭಟನಾಕಾರರು ಒಳ ಪ್ರವೇಶಿಸದಂತೆ ಪೊಲೀಸರು ತಡೆದಿದ್ದು, ಈ ವೇಳೆ ತಳ್ಳಾಟ ನೂಕಾಟ ಉಂಟಾಗಿದೆ. ಹಲವು ಮಂದಿ ಸಿಎಫ್‌ಐ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಇದಕ್ಕೂ ಪ್ರತಿಭಟನೆ ವೇಳೆ ವಿವಿ ಆಡಳಿತ ಮಂಡಳಿ ಮತ್ತು ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ಫೋಷಣೆಗಳನ್ನು ಕೂಗಿದರು. ಪ್ರತಿಭಟನೆ ನಡೆಯುತ್ತಿದ್ದಂತೆ ಇನ್ನೊಂದು ದ್ವಾರದಲ್ಲಿ ಕ್ಯಾಂಪಸ್‌ಗೆ ಬಂದ ಕಲ್ಲಡ್ಕ ಪ್ರಭಾಕರ ಭಟ್‌ ಅವರು ವಿದ್ಯಾರ್ಥಿ ಪರಿಷತ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.