ಜಿಲ್ಲೆ

8ರಂದು ಸಿದ್ದರಾಮೇಶ್ವರ ಜಯಂತ್ಯುತ್ಸವ

ಚಳ್ಳಕೆರೆ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಮಾ.8ರಂದು ನಗರದ ಭೋವಿ ಹಾಸ್ಟೆಲ್ ಸಭಾಂಗಣದಲ್ಲಿ ಸಿದ್ದರಾಮೇಶ್ವರ 847ನೇ ಜಯಂತ್ಯುತ್ಸವ ಹಮ್ಮಿಕೊಳ್ಳಲಾಗಿದೆ.

ಆರೋಗ್ಯ ಸಚಿವ ಬಿ.ಶ್ರೀರಾಮುಲು ಸಮಾರಂಭ ಉದ್ಘಾಟಿಸುವರು. ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆ ವಹಿಸುವರು. ನಿವೃತ್ತ ಪ್ರಾಚಾರ್ಯ ಎಚ್.ಕನಕದಾಸ, ಸಿದ್ದರಾಮೇಶ್ವರ ಅವರ ಬಗ್ಗೆ ಉಪನ್ಯಾಸ ನೀಡುವರು ಎಂದು ತಹಸೀಲ್ದಾರ್ ಎಂ.ಮಲ್ಲಿಕಾರ್ಜುನ ತಿಳಿಸಿದ್ದಾರೆ.