ಜಿಲ್ಲೆ

ಬಿತ್ತನೆ ಬೀಜ ವಿತರಣೆಗೆ ವ್ಯವಸ್ಥೆ

Chitradurga

ಚಳ್ಳಕೆರೆ: ತಾಲೂಕಿನ ಪರಶುರಾಂಪುರ ಹೋಬಳಿ 10 ಗ್ರಾಮ ಪಂಚಾಯಿತಿ ಹಳ್ಳಿಗಳ ರೈತರಿಗೆ ಶೇಂಗಾ ಬಿತ್ತನೆ ಬೀಜ ವಿತರಣೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಈ ವರ್ಷ ಉತ್ತಮ ಮುಂಗಾರು ಮಳೆ ನಿರೀಕ್ಷೆಯಿಂದ ರೈತರು ಕೃಷಿ ಚಟುವಟಿಕೆಯಲ್ಲಿ ಹೆಚ್ಚು ತೊಡಗಿಕೊಂಡಿದ್ದಾರೆ. ಹೋಬಳಿ ಹಂತದ ರೈತರಿಗೆ 4,600 ಕ್ವಿಂಟಾಲ್ ಶೇಂಗಾ ಬಿತ್ತನೆ ಬೀಜ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಸಾಮಾನ್ಯ ವರ್ಗದ ರೈತರಿಗೆ 5,900, ಎಸ್ಸಿ-ಎಸ್ಟಿ ರೈತರಿಗೆ 5,200 ರೂ. ನಂತೆ ಪ್ರತಿ ರೈತರಿಗೆ 5 ಚೀಲ ವಿತರಣೆ ಮಾಡಲಾಗುತ್ತಿದೆ. ಈಗಾಗಲೇ 1600 ಕ್ವಿಂಟಾಲ್ ವಿತರಣೆ ಮಾಡಲಾಗಿದೆ ಎಂದು ರೈತ ಸಂಪರ್ಕ ಕೇಂದ್ರ ಪ್ರಕಟಣೆ ತಿಳಿಸಿದೆ.