ಚಳ್ಳಕೆರೆ: ಸೀಮಾಂಧ್ರದ ಕಾಳಸ್ತ್ರಿಯ ನಾಯ್ಡು ಪೇಟೆಯಲ್ಲಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಚೌಳೂರಿನ ಎಚ್.ಮಂಜುನಾಥ (23) ಮೃತಪಟ್ಟಿದ್ದಾನೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಂಬ್ಯುಲೆನ್ಸ್ ವಾಹನ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ. ಕರ್ತವ್ಯ ನಿರತ ಬೆಂಗಳೂರಿನಿಂದ ತಿರುಪತಿ ಮಾರ್ಗವಾಗಿ ಸಾಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ನಾಯ್ಡು ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.