ಚಾಮರಾಜನಗರ: ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಕರ್ನಾಟಕ ಅರಣ್ಯ ಇಲಾಖೆಯಲ್ಲಿ 2022-23ನೇ ಸಾಲಿನಲ್ಲಿ ಗಣನೀಯ ಸೇವೆ ಸಲ್ಲಿಸಿದ ಕೊಳ್ಳೇಗಾಲದ ಉಪ ವಲಯ ಅರಣ್ಯಾಧಿಕಾರಿ ಹಾಗೂ ಮೋಜಣಿದಾರ ಅನಂತರಾಮು.ಬಿ. ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಮುಖ್ಯಮಂತ್ರಿ ಪದಕ ಪ್ರದಾನ ಮಾಡಿದರು.
ಈ ವೇಳೆ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಅರಣ್ಯ ಪಡೆ ಮುಖ್ಯಸ್ಥ ಬ್ರಿಜೇಶ್ ಕುಮಾರ್ ದೀಕ್ಷಿತ್ ಭಾಗವಹಿಸಿದ್ದರು.