ಚಾಮರಾಜನಗರ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯದ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
2024-25ನೇ ಸಾಲಿನಲ್ಲಿ ಚಾಮರಾಜನಗರ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ 5ರಿಂದ 10ನೇ ತರಗತಿಯವರೆಗೆ ಪ್ರವೇಶಕ್ಕಾಗಿ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ನಿಲಯಕ್ಕೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕ(ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ ಚಾಮರಾಜನಗರ ತಾಲೂಕು ಕಚೇರಿ (ದೂ.ಸಂ 08226-223143) ಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.