ಚಾಮರಾಜನಗರ : ನಗರದ ಸಮೀಪವಿರುವ ದೊಡ್ಡರಾಯಪೇಟೆ ಗೇಟ್‌ನಲ್ಲಿ ಬುಧವಾರ ರಾತ್ರಿ ಸ್ಕೂಟರ್ ಹಾಗೂ ಟಿಪ್ಪರ್‌ಗೆ ಮುಖಾಮುಖಿ ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ತಾಲೂಕಿನ ದೊಡ್ಡರಾಯಪೇಟೆ ಗ್ರಾಮದ ವಿ.ಗೋಪಾಲ್(55) ಮೃತ ದುರ್ದೈವಿ. ಚಾಮರಾಜನಗರದ ಕಡೆಯಿಂದ ದೊಡ್ಡರಾಯಪೇಟೆ ಗ್ರಾಮಕ್ಕೆ ತೆರಳುವ ಸಂದರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸಂತೇಮರಹಳ್ಳಿ ಕಡೆಯಿಂದ ಬಂದ ಟಿಪ್ಪರ್ ಡಿಕ್ಕಿಹೊಡೆದ ಪರಿಣಾಮ ಬೈಕ್‌ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೊಡ್ಡರಾಯಪೇಟೆ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಬೀದಿದೀಪದ ವ್ಯವಸ್ಥೆಯನ್ನು ಸೂಕ್ತವಾಗಿ ಕಲ್ಪಿಸದ ಹಿನ್ನೆಲೆಯಲ್ಲಿ ನಿರಂತರವಾಗಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದೆ. ಅಧಿಕಾರಿಗಳು ಈ ಕೂಡಲೇ ಎಚ್ಚೆತ್ತುಕೊಂಡು ಬೀದಿದೀಪ ಅಳವಡಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.