ಜಿಲ್ಲೆ

ಚಾ.ನಗರದಲ್ಲಿ ರೈತರಿಂದ ಪ್ರತಿಭಟನೆ

reportermys

ಚಾಮರಾಜನಗರ: ತಾಲೂಕಿನ ಬದನಗುಪ್ಪೆ-ಮೇಲಾಜಿಪುರ ಸಂಪರ್ಕ ಕಲ್ಪಿಸುವ ರಸ್ತೆಯ ಒತ್ತುವರಿ ತೆರವುಗೊಳಿಸಿ ಅಭಿವೃದ್ಧಿಪಡಿಸುವಂತೆ ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಬದನಗುಪ್ಪೆ ಗ್ರಾಮ ಪಂಚಾಯತಿ ಕಚೇರಿ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಿದರು.
ಬದನಗುಪ್ಪೆ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.


ಬದನಗುಪ್ಪೆ-ಮೇಲಾಜಿಪುರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯು ಒತ್ತುವರಿಯಿಂದಾಗಿ ಕಿರಿದಾಗಿದೆ. ಬದನಗುಪ್ಪೆ ಗ್ರಾಮದಿಂದ ಬರುವ ಚರಂಡಿ ನೀರು ರಸ್ತೆಯಲ್ಲಿಯೇ ಹರಿ ಯುತ್ತಿದ್ದು ಜನರು, ವಿದ್ಯಾರ್ಥಿಗಳು ಓಡಾಡಲು ತೊಂದರೆಯಾಗಿದೆ. ರಸ್ತೆ ಒತ್ತುವರಿ ತೆರವುಗೊಳಿಸಿ ಅಭಿವೃದ್ಧಿಪಡಿಸುವಂತೆ ಕಳೆದ 2 ವರ್ಷಗಳಿಂದಲೂ ಸಂಬಂಧಪಟ್ಟ ಜಿಲ್ಲಾಧಿಕಾರಿ, ತಹಸೀಲ್ದಾರ್, ಪಿಡಿಒಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆಯನ್ನು ಬಗೆಹರಿಸಬೇಕು. ಅಲ್ಲದೇ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆಯನ್ನು ಸರಿಯಾಗಿ ಅನುಷ್ಠಾನ ಗೊಳಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದರು.

ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಕುಮಾರ್ ಮೇಲಾಜಿಪುರ, ಸಂಘಟನಾ ಕಾರ್ಯದರ್ಶಿ ವಿಜಯ್‌ಕುಮಾರ್ ಹೆಗ್ಗೋಠಾರ, ಪದಾಧಿಕಾರಿಗಳಾದ ಮಂಜು ಪ್ರಸಾದ್, ಶಿವರುದ್ರಪ್ಪ, ಅಶೋಕ್, ಚೆನ್ನಮಲ್ಲಪ್ಪ, ಉಮೇಶ್ ಇತರರು ಭಾಗವಹಿಸಿದ್ದರು.