ಜಿಲ್ಲೆ

ಮಕ್ಕಳಲ್ಲಿ ಅತಿಸಾರ ಬೇದಿ ತಪ್ಪಿಸಲು ಕ್ರಮ

reportermys

ಚಾಮರಾಜನಗರ: ತೀವ್ರ ಅತಿಸಾರ ಬೇದಿಯಿಂದ ಮಕ್ಕಳು ಅನಾರೋಗ್ಯಕ್ಕೀಡಾಗುತ್ತಿದ್ದು, ಇದನ್ನು ತಪ್ಪಿಸಲು ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಕಾರಿ ಚಾರುಲತಾ ಸೋಮಲ್ ತಿಳಿಸಿದರು.


ನಗರದ ರಾಮಸಮುದ್ರದ ಅಂಗನವಾಡಿ ಕೇಂದ್ರದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಸೋಮವಾರ ಆಯೋಜಿಸಿದ್ದ ತೀವ್ರತರ ಅತಿಸಾರ ಬೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವತಿಯಿಂದ 5 ವರ್ಷದೊಳಗಿನ ಮಕ್ಕಳು ಅತಿಸಾರ ಬೇಯಿಂದ ಅನಾರೋಗ್ಯಕ್ಕೆ ಒಳಗಾಗಬಾರದು ಎಂಬ ದೃಷ್ಟಿಯಿಂದ ಒಆರ್‌ಎಸ್ ಪ್ಯಾಕೆಟ್‌ಗಳನ್ನು ಆ.1 ರಿಂದ 15ರವರೆಗೆ ಜಿಲ್ಲೆಯಲ್ಲಿ ಒಟ್ಟು 59,700 ಮಕ್ಕಳಿಗೆ ವಿತರಿಸಲಾಗುತ್ತಿದೆ. ಇದರ ಬಳಕೆಯನ್ನು ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರು ಪ್ರತಿ ಮನೆಗೂ ತೆರಳಿ ತಿಳಿವಳಿಕೆ ಮೂಡಿಸಲಿದ್ದಾರೆ ಎಂದರು.


ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ಗಾಯತ್ರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಗೀತಾಲಕ್ಷ್ಮೀ, ನಗರಸಭೆ ಸದಸ್ಯ ಪ್ರಕಾಶ್, ತಾಲೂಕು ಆರೋಗ್ಯಾಕಾರಿ ಡಾ.ಶ್ರೀನಿವಾಸ್, ಸಾರ್ವಜನಿಕ ಶಿಕ್ಷಣ ಇಲಾಖೆ ಕಾರ್ಯಕ್ರಮ ಅಕಾರಿ ಲಕ್ಷ್ಮೀಪತಿ, ಜಿಲ್ಲಾ ನರ್ಸಿಂಗ್ ಅಕಾರಿ ಶಾಂತಮ್ಮ ಇತರರು ಇದ್ದರು.