ಜಿಲ್ಲೆ

ಭಾರೀ ಮಳೆ ಹಿನ್ನೆಲೆ, ಈ ಜಿಲ್ಲೆಯ ಶಾಲೆಗಳಿಗೆ ಎರಡು ದಿನ ರಜೆ ಘೋಷಣೆ

theerthaswamy

ಚಾಮರಾಜನಗರ: ಜಿಲ್ಲಾದ್ಯಂತ ಭಾರಿ ಮಳೆ ಹಿನ್ನೆಲೆ ಎರಡು ದಿನ ಶಾಲೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಆಗಸ್ಟ್ 5 ಮತ್ತು 6ನೇ ತಾರೀಖಿನಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಚಾಮರಾಜನಗರ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶ ಹೊರಡಿಸಿದ್ದಾರೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಹಿನ್ನೆಲೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಗೋಪಿನಾಥಂ-ಹೊಗನೇಕಲ್ ರಸ್ತೆ ಜಲಾವೃತ: ಚಾಮರಾಜನಗರ ಜಿಲ್ಲೆಯಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಮಳೆಯ ನೀರಿನಿಂದ ರಸ್ತೆಗಳು ಜಲಾವೃತಗೊಂಡಿವೆ. ಹನೂರು ತಾಲೂಕಿನ ಗೋಪಿನಾಥಂ-ಹೊಗನೇಕಲ್ ರಸ್ತೆ ಜಲಾವೃತವಾಗಿದ್ದು, ವಾಹನ ಸಂಚಾರ ನಡೆಸುವುದು ಕಷ್ಟವಾಗಿದೆ.