ಕೊಳ್ಳೇಗಾಲ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಬುಧವಾರ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಮಾಲಾರ್ಪಣೆ ಮಾಡಿದರು. ಸಿ.ಪುಟ್ಟರಂಗಶೆಟ್ಟಿ, ಎಚ್.ಎಂ.ಗಣೇಶ್ ಪ್ರಸಾದ್, ದರ್ಶನ್ ಧ್ರುವನಾರಾಯಣ ಇತರರು ಇದ್ದರು.
ಕೊಳ್ಳೇಗಾಲ: ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಬುಧವಾರ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಮಾಲಾರ್ಪಣೆ ಮಾಡಿದರು.
ಇದಕ್ಕೂ ಮುನ್ನ ಪಟ್ಟಣದ ಹಳೇ ಪ್ರವಾಸಿ ಮಂದಿರಕ್ಕೆ ಆಗಮಿಸಿದ ಅವರನ್ನು ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ತೋಟೇಶ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಶಾಲು, ಹಾರ ಹೊದಿಸಿ ಭವ್ಯ ಸ್ವಾಗತ ಕೋರಿದರು. ಮುಖಂಡರು ಜೈಕಾರ ಕೂಗಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಬಳಿಕ ಆದರ್ಶ ನಗರದಲ್ಲಿರುವ ಹೋರಾಟಗಾರ ದಿ.ಕೃಷ್ಣಸ್ವಾಮಿ ಪುತ್ರ ಬೆಂಗಳೂರಿನ ಸಿಸಿಬಿ ವಿಭಾಗದ ಎಎಸ್‌ಪಿ ಮಹಾನಂದ್ ಕೃಷ್ಣಸ್ವಾಮಿ ನಿವಾಸಕ್ಕೆ ಭೇಟಿ ನೀಡಿ ಮಧ್ಯಾಹ್ನದ ಭೋಜನ ಸವಿದರು. ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ, ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್, ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ ಇದ್ದರು.
ನಂತರ, ಎಚ್.ಕೆ ಮೆಮೋರಿಯಲ್ ಟ್ರಸ್ಟ್ ಅಧ್ಯಕ್ಷೆ ಪ್ರೇಮಲತಾ ಕೃಷ್ಣ ಸ್ವಾಮಿ, ಮಹಾನಂದ್ ಕೃಷ್ಣಸ್ವಾಮಿ ಕುಟುಂಬ ಡಾ.ಜಿ.ಪರಮೇಶ್ವರ ಅವರನ್ನು ಸನ್ಮಾನಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ಕಾರ್ಯದರ್ಶಿ ರವಿ ಬಸ್ತೀಪುರ, ನಗರಸಭೆ ಮಾಜಿ ಅಧ್ಯಕ್ಷ ರಮೇಶ್, ಮಾಜಿ ಸದಸ್ಯರಾದ ಮಂಜುನಾಥ್ ಪ್ರಕಾಶ್ ಶಂಕನಪುರ, ರಾಮಕೃಷ್ಣ, ಶಾಂತರಾಜು ಮುಡಿಗುಂಡ, ಡಾ.ಬಿ.ಆರ್.ಅಂಬೇಡ್ಕರ್ ಸ್ಮಾರಕ ಸಂಘದ ಅಧ್ಯಕ್ಷ ಆನಂದ ಮೂರ್ತಿ, ಎಂ. ಪಾಪಣ್ಣ, ಸಿದ್ದಯ್ಯಪುರ ರಾಜೇಂದ್ರ ಇತರರು ಇದ್ದರು.