ಹನೂರು ತಾಲೂಕಿನ ಮಿಣ್ಯಂಗೆ ತೆರಳುವ ಮುಖ್ಯ ರಸ್ತೆ ಬದಿಯಲ್ಲಿನ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡ ಒಂಟಿ ಸಲಗ.
ಸಾರ್ವಜನಿಕರಲ್ಲಿ ಕೆಲಕಾಲ ಆತಂಕ
ಹನೂರು: ತಾಲೂಕಿನ ಮಿಣ್ಯಂಗೆ ತೆರಳುವ ಮಾರ್ಗಮಧ್ಯೆಯ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಒಂಟಿ ಸಲಗವೊಂದು ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಕೆಲಕಾಲ ಆತಂಕ ಉಂಟು ಮಾಡಿತು.
ಈ ಮಾರ್ಗವು ಮಿಣ್ಯಂ, ಗಾಜನೂರು, ಕೊಪ್ಪ, ಹೂಗ್ಯಂ ಹಾಗೂ ಈ ಭಾಗದ ಇನ್ನಿತರ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಾಗಿದ್ದು, ಅರಣ್ಯ ಪ್ರದೇಶದ ಮೂಲಕ ಹಾದು ಹೋಗಿದೆ. ಈ ಅರಣ್ಯ ಪ್ರದೇಶದಲ್ಲಿ ಆನೆ, ಹುಲಿ ಸೇರಿದಂತೆ ಇನ್ನಿತರ ಕಾಡು ಪ್ರಾಣಿಗಳಿವೆ. ಆದರೆ ಕಾಡಾನೆ ಬೆಳಗಿನ ವೇಳೆಯಲ್ಲಿ ಕಾಣಿಸಿಕೊಳ್ಳುತ್ತಿರಲಿಲ್ಲ. ಶುಕ್ರವಾರ ಒಂಟಿ ಸಲಗವೊಂದು ರಸ್ತೆ ಬದಿಯ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡಿದೆ. ಇದರಿಂದ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ಆತಂಕಕ್ಕೆ ಒಳಗಾದರು. ಆನೆಯ ಚಲನ ವಲನದ ದೃಶ್ಯವನ್ನು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಕಾಡಾನೆ ರಸ್ತೆ ಸಮೀಪದ ಕಾಣಿಸಿಕೊಳ್ಳದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಒತ್ತಾಯಿಸಿದ್ದಾರೆ.