ಗುಂಡ್ಲುಪೇಟೆ ತಾಲೂಕಿನ ಹೊರೆಯಾಲ ಗ್ರಾಮದ ಮಹದೇವಮ್ಮ ಅವರಿಗೆ ಚೈತ್ರಾ ಮಾಸಾಶನ ಮಂಜೂರಾತಿ ಪತ್ರ ನೀಡಿದರು. ಬಸವರಾಜು ಇದ್ದರು. 
ಚಾಮರಾಜನಗರ

ಸಮಾಜದ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಗ್ರಾಮೀಣಾಭಿವೃದ್ಧಿ ಸಂಸ್ಥೆ

ಗುಂಡ್ಲುಪೇಟೆ: ತಾಲೂಕಿನ ಹೊರೆಯಾಲ ಗ್ರಾಮದ ನಿವಾಸಿ ಮಹದೇವಮ್ಮ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ ಮಾಸಾಶನ ಮಂಜೂರಾತಿ ಪತ್ರ ವಿತರಣೆ ಮಾಡಲಾಯಿತು.
ಚೆಕ್ ವಿತರಣೆ ಮಾಡಿ ಮಾತನಾಡಿದ ಯೋಜನೆಯ ಜ್ಞಾನವಿಕಾಸ ಸಮನ್ವಯಾಧಿಕಾರಿ ಚೈತ್ರಾ, ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಅಮ್ಮನವರ ಆಶಯದಂತೆ ಸಮಾಜದ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಬಡವರ ಹಾಗೂ ಅಸಹಾಯಕರ ಆರ್ಥಿಕ ಸಬಲೀಕರಣದ ಜೊತೆಗೆ ಸಮುದಾಯದ ಅಭಿವೃದ್ಧಿ ತನ್ನದೇ ಆದ ಕೊಡುಗೆ ನೀಡುತ್ತಿದೆ. ಈ ಅಂಗವಾಗಿ ಸಮಾಜದ ಕಟ್ಟ ಕಡೆಯ ನಿರ್ಗತಿಕರಿಗೆ ಸಮಾಜದಲ್ಲಿ ಜೀವನ ನಿರ್ವಹಣೆಗಾಗಿ ಮಾಶಾಸನ ನೀಡಲಾಗುತ್ತದೆ ಎಂದರು.
ಗುಂಡ್ಲುಪೇಟೆ ತಾಲೂಕಿನಲ್ಲಿ 64 ಫಲಾನುಭವಿಗಳಿಗೆ ಪ್ರತಿ ತಿಂಗಳು ಒಂದು ಸಾವಿರದಂತೆ ನೀಡುತ್ತಿದ್ದು ಇದರೊಂದಿಗೆ ಆರೋಗ್ಯದ ಸಮತೋಲನಕಾಗಿ ವಾತ್ಸಲ್ಯ ಮಿಕ್ಸ್, ಫುಡ್ ನೀಡಲಾಗುತ್ತಿದೆ. ಆ ಮೂಲಕ ಸಾಮಾಜದ ಹಿತಕ್ಕಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶ್ರಮಿಸುತ್ತಿದೆ ಎಂದು ಹೇಳಿದರು.