ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಪೊಲೀಸರು ಅನ್ನಭಾಗ್ಯ ಯೋಜನೆಯಲ್ಲಿ ವಿತರಣೆ ಮಾಡಿರುವ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆ.ಎಂ.ಮಹೇಶ್, ಪೂರ್ಣಿಮಾ ಇದ್ದರು.  
ಚಾಮರಾಜನಗರ

ಪಡಿತರ ಅಕ್ಕಿ ಸಾಗಿಸುತ್ತಿದ್ದ ಆರೋಪಿ ವಶಕ್ಕೆ

ಕಿರಣ್ ಗೌಡ.ಜಿ

ಪ್ರಮುಖ ಮುಖ್ಯಾಂಶಗಳು

  • ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಗುಂಡ್ಲುಪೇಟೆ: ಊರೂರುಗಳಿಗೆ ತೆರಳಿ ಸರ್ಕಾರ ಅನ್ನಭಾಗ್ಯ ಯೋಜನೆಯಲ್ಲಿ ವಿತರಣೆ ಮಾಡುವ ಅಕ್ಕಿಯನ್ನು ಕಡಿಮೆ ಬೆಲೆಗೆ ಖರೀದಿಸಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಆರೋಪಿಯನ್ನು ಭಾನುವಾರ ತಾಲೂಕಿನ ತೆರಕಣಾಂಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮದ್ದೂರು ತಾಲೂಕಿನ ಕಲ್ಕುಣಿ ಗ್ರಾಮದ ಅಕ್ಮಲ್ ಪಾಶಾ ಗೂಡ್ಸ್ ವಾಹನದಲ್ಲಿ ಅನ್ನಭಾಗ್ಯ ಅಕ್ಕಿಯನ್ನು ಸಾಗಣೆ ಮಾಡುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ತೆರಕಣಾಂಬಿ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ಕೆ.ಎಂ.ಮಹೇಶ್ ದಾಳಿ ನಡೆಸಿ 30 ಕೆಜಿ ತೂಕದ 50 ಚೀಲಗಳಲ್ಲಿ ತುಂಬಿಸಿಕೊಂಡಿದ್ದ 1.5 ಕ್ವಿಂಟಾಲ್ ಅಕ್ಕಿಯನ್ನು ಮಾಲುಸಮೇತ ವಶಕ್ಕೆ ಪಡೆದರು.
ಆಹಾರ ಇಲಾಖೆಯ ಪೂರ್ಣಿಮಾ ನೀಡಿದ ದೂರು ಸ್ವೀಕರಿಸಿದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.