- ಹೌಸಿಂಗ್ ಬೋರ್ಡ್ ಕಾಲನಿಯಲ್ಲಿ ರಾತ್ರಿ ವೇಳೆ ಕೃತ್ಯ
- ಆರೋಪಿ ಅಮೃತ್ ಬಂಧನ
ಚಾಮರಾಜನಗರ: ನಗರದ ಹೌಸಿಂಗ್ ಬೋರ್ಡ್ ಕಾಲನಿ, ಇಂದಿರಾ ನಗರ ಮತ್ತು ಕರಿನಂಜಪುರ ಬಡಾವಣೆಯಲ್ಲಿ ಮಧ್ಯಾರಾತ್ರಿ ವೇಳೆ ಮನೆಗಳ ಬಳಿ ಒಣಗಿ ಹಾಕಿದ್ದ ಮಹಿಳೆಯರ ಒಳ ಉಡುಪನ್ನು ಕದಿಯುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ.
ನಗರದ ಹೌಸಿಂಗ್ ಬೋರ್ಡ್ ಕಾಲನಿಯ ನಿವಾಸಿ ಅಮೃತ್(27) ಬಂಧಿತ ಆರೋಪಿ. ಈತನ ವಿರುದ್ಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಮೃತ್‌ನನ್ನು ವಶಕ್ಕೆ ಪಡೆದ ಬಳಿಕ ವಿಚಾರಣೆ ನಡೆಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ. ಈತನ್ನು ಪತ್ತೆ ಹಚ್ಚಲು ರಚಿಸಿದ್ದ ವಿಶೇಷ ತಂಡಕ್ಕೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಂ.ಮುತ್ತುರಾಜು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.