ARREST 
ಚಾಮರಾಜನಗರ

ಕೇರಳಂ ರಾಜ್ಯ ಲಾಟರಿ ಮಾರುತ್ತಿದ್ದ ಆರೋಪಿ ಸೆರೆ

ಗುಂಡ್ಲುಪೇಟೆ: ಪಟ್ಟಣ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕೇರಳಂ ರಾಜ್ಯ ಲಾಟರಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ, ಲಾಟರಿ ಟಿಕೆಟ್ ವಶಪಡಿಸಿಕೊಂಡಿದ್ದಾರೆ.
ಸ್ಥಳೀಯ ನಿವಾಸಿ ಗೊವಿಂದನಾಯಕ(31) ಬಂಧಿತ. ಈತ
ಪಟ್ಟಣದಲ್ಲಿ ಕೇರಳಂ ರಾಜ್ಯ ಲಾಟರಿ ಟಿಕೆಟ್ ಮಾರಾಟ ಮಾಡುತ್ತಿದ್ದ, ಬಗ್ಗೆ ಬಂದ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಅಪರಾಧ ವಿಭಾಗದ ಪೊಲೀಸರು ದಾಳಿ ನಡೆಸಿದರು. ದಾಳಿ ವೇಳೆ ಈತನಿಂದ 200 ಟಿಕೆಟ್, ಒಟ್ಟು ರೂ.10,000 ಗಳ ಲಾಟರಿ ಟಿಕೆಟ್ ವಶಪಡಿಸಿಕೊಳ್ಳಲಾಗಿದೆ.
ಈತನ ವಿರುದ್ಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.