ಚಾಮರಾಜನಗರದ ಜೆಎಸ್‌ಎಸ್ ಮಹಿಳಾ ಕಾಲೇಜು ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಲಾಗಿತ್ತು. ಡಾ.ಸಿ.ಗೀತಾ, ಡಾ.ಎಂ.ಜಾನಕಿ, ಡಾ.ಕೆ.ಸಿ.ಬಸವಣ್ಣ, ಪ್ರೊ.ಕೆ.ಎಂ.ಯೋಗೇಶ್, ಎಸ್.ಎನ್.ರಾಜು ಜೈನ್, ಡಿ.ಎಸ್.ಸುರೇಶ್, ಕೆ.ಎಸ್.ಸಿದ್ದರಾಜು ಇತರರಿದ್ದರು. 
ಚಾಮರಾಜನಗರ

ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರಿಂದ ಸಾಧನೆ

ಪ್ರಮುಖ ಮುಖ್ಯಾಂಶಗಳು

  • Achievements by women
ಚಾಮರಾಜನಗರ: ಪ್ರಸ್ತುತ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಉತ್ತಮ ಸಾಧನೆ ಮಾಡುತ್ತಿದ್ದಾರೆ ಎಂದು ಶಿವಮೊಗ್ಗ ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯ ಶಿಕ್ಷಣಶಾಸ್ತ್ರ ಅಧ್ಯಯನ ಮತ್ತು ಸಂಶೋಧನೆ ವಿಭಾಗದ ಪ್ರಾಧ್ಯಾಪಕಿ ಡಾ.ಸಿ.ಗೀತಾ ಹೇಳಿದರು.
ನಗರದ ಜೆಎಸ್‌ಎಸ್ ಶಿಕ್ಷಣ ಮಹಾವಿದ್ಯಾಲಯ ಬಿ.ಎಡ್ ಕಾಲೇಜಿನ ವತಿಯಿಂದ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಹೆಣ್ಣು ಮಕ್ಕಳು ವಿದ್ಯಾಭ್ಯಾಸ ಮಾಡಿ ಮುಖ್ಯವಾಹಿನಿಗೆ ಬರಬೇಕು. ಇಂದು ದೇಶದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರು ತಮ್ಮದೇ ಆದ ಸಾಧನೆ ಮಾಡುತ್ತಿದ್ದಾರೆ. ಪ್ರತಿಯೊಬ್ಬರೂ ಸವಾಲುಗಳನ್ನು ಸ್ವೀಕರಿಸಿ ಮುನ್ನಡೆದರೆ ಭವಿಷ್ಯ ಉಜ್ವಲವಾಗುತ್ತದೆ ಎಂದು ಸಲಹೆ ನೀಡಿದರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಸಹ ಪ್ರಾಧ್ಯಾಪಕಿ ಡಾ.ಎಂ.ಜಾನಕಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಮಹಿಳೆಯರ ಅಭಿವೃದ್ಧಿಗಾಗಿ ಹಲವಾರು ಜನಪರ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಈ ಎಲ್ಲ ಸೌಲಭ್ಯಗಳನ್ನು ಪಡೆದುಕೊಂಡು ಉತ್ತಮ ಸಾಧನೆ ಮಾಡಿ. ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸಿ ಉನ್ನತ ಸಾಧನೆ ಮಾಡಬೇಕು ಎಂದು ತಿಳಿಸಿದರು.
ಜೆಎಸ್‌ಎಸ್ ಬಿ.ಎಡ್ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಸಿ.ಬಸವಣ್ಣ ಮಾತನಾಡಿ, ಜೆಎಸ್‌ಎಸ್ ಶಿಕ್ಷಣ ಸಂಸ್ಥೆ ವಿದ್ಯಾಭ್ಯಾಸ ಮಾಡಿದ ಲಕ್ಷಾಂತರ ಜನರು ಶಿಕ್ಷಕರಾಗಿ ದೇಶದ ವಿವಿಧ ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು. ಜೆಎಸ್‌ಎಸ್ ಬಿ.ಎಡ್ ಕಾಲೇಜಿನ ಪ್ರೊ.ಕೆ.ಎಂ.ಯೋಗೇಶ್, ಎಸ್.ಎನ್.ರಾಜು ಜೈನ್, ಡಿ.ಎಸ್.ಸುರೇಶ್, ಕೆ.ಎಸ್.ಸಿದ್ದರಾಜು, ಬಿ.ಶಿವಕುಮಾರ್, ಎನ್.ಲಕ್ಷ್ಮೀ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.