ಚಾಮರಾಜನಗರದ ಜೆಎಸ್‌ಎಸ್ ಮಹಿಳಾ ಕಾಲೇಜು ಸಭಾಂಗಣದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಯೋಜಿಸಲಾಗಿತ್ತು. ಡಾ.ಸಿ.ಗೀತಾ, ಡಾ.ಎಂ.ಜಾನಕಿ, ಡಾ.ಕೆ.ಸಿ.ಬಸವಣ್ಣ, ಪ್ರೊ.ಕೆ.ಎಂ.ಯೋಗೇಶ್, ಎಸ್.ಎನ್.ರಾಜು ಜೈನ್, ಡಿ.ಎಸ್.ಸುರೇಶ್, ಕೆ.ಎಸ್.ಸಿದ್ದರಾಜು ಇತರರಿದ್ದರು. 
ಚಾಮರಾಜನಗರ

ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರಿಂದ ಸಾಧನೆ

ಪ್ರಮುಖ ಮುಖ್ಯಾಂಶಗಳು

  • ಪ್ರಾಧ್ಯಾಪಕಿ ಡಾ.ಸಿ.ಗೀತಾ ಅಭಿಪ್ರಾಯ
  • ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ
  • ಬಿಎಡ್ ಕಾಲೇಜಿನ ವತಿಯಿಂದ ನಡೆದ ಕಾರ್ಯಕ್ರಮ
ಚಾಮರಾಜನಗರ: ಪ್ರಸ್ತುತ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಉತ್ತಮ ಸಾಧನೆ ಮಾಡುತ್ತಿದ್ದಾರೆ ಎಂದು ಶಿವಮೊಗ್ಗ ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯ ಶಿಕ್ಷಣ ಶಾಸ್ತ್ರ ಅಧ್ಯಯನ ಮತ್ತು ಸಂಶೋಧನೆ ವಿಭಾಗದ ಪ್ರಾಧ್ಯಾಪಕಿ ಡಾ.ಸಿ.ಗೀತಾ ಹೇಳಿದರು.
ನಗರದ ಜೆಎಸ್‌ಎಸ್ ಶಿಕ್ಷಣ ಮಹಾವಿದ್ಯಾಲಯ ಬಿಎಡ್ ಕಾಲೇಜಿನ ವತಿಯಿಂದ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಹೆಣ್ಣು ಮಕ್ಕಳು ನಿರಂತರ ಕಠಿಣ ಅಭ್ಯಾಸದಿಂದ ವಿದ್ಯಾಭ್ಯಾಸ ಮಾಡಿ ಮುಖ್ಯ ವಾಣಿಗೆ ಬರಬೇಕು. ದೇಶದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರು ತಮ್ಮದೇ ಆದ ಸಾಧನೆ ಮಾಡುತ್ತಿದ್ದಾರೆ. ಪ್ರತಿಯೊಬ್ಬ ಮಹಿಳೆಯರು ಸವಾಲುಗಳನ್ನು ಸ್ವೀಕರಿಸಿ ಮುನ್ನಡೆದರೆ ಭವಿಷ್ಯ ಉಜ್ವಲವಾಗುತ್ತದೆ ಎಂದು ಸಲಹೆ ನೀಡಿದರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಸಹ ಪ್ರಾಧ್ಯಪಕಿ ಡಾ.ಎಂ.ಜಾನಕಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಮಹಿಳೆಯರ ಅಭಿವೃದ್ಧಿಗಾಗಿ ಹಲವಾರು ಜನಪರ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಈ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಂಡು ಉತ್ತಮ ಸಾಧನೆ ಮಾಡಿ. ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸಿ ಉನ್ನತ ಸಾಧನೆ ಮಾಡಬೇಕು ಎಂದು ತಿಳಿಸಿದರು.
ಜೆಎಸ್‌ಎಸ್ ಬಿ.ಎಡ್ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಸಿ.ಬಸವಣ್ಣ ಮಾತನಾಡಿ, ಜೆಎಸ್‌ಎಸ್ ಶಿಕ್ಷಣ ಸಂಸ್ಥೆ ವಿದ್ಯಾಭ್ಯಾಸ ಮಾಡಿದ ಲಕ್ಷಾಂತರ ಜನರು ಶಿಕ್ಷಕರಾಗಿ ದೇಶದ ವಿವಿಧ ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಜೆಎಸ್‌ಎಸ್ ಬಿ.ಎಡ್ ಕಾಲೇಜಿನ ಪ್ರೊ.ಕೆ.ಎಂ.ಯೋಗೇಶ್, ಎಸ್.ಎನ್.ರಾಜು ಜೈನ್, ಡಿ.ಎಸ್.ಸುರೇಶ್, ಕೆ.ಎಸ್.ಸಿದ್ದರಾಜು, ಬಿ.ಶಿವಕುಮಾರ್, ಎನ್.ಲಕ್ಷ್ಮೀ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.