ಚಾಮರಾಜನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜಯಂತಿ ಕಾರ್ಯಕ್ರಮ ನಡೆಯಿತು. ಪಿ.ಮರಿಸ್ವಾಮಿ, ಬಿ.ಕೆ. ರವಿಕುಮಾರ್, ಚಿನ್ನಸ್ವಾಮಿ, ಸೈಯದ್ ರಫಿ, ಆರ್.ಮಹದೇವ್, ಎ.ಎಸ್.ಗುರುಸ್ವಾಮಿ, ಎಚ್.ವಿ.ಚಂದ್ರು ಇತರರು ಇದ್ದರು.
- ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ ಬಣ್ಣನೆ
- ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕ್ರಮ
ಚಾಮರಾಜನಗರ: ಅಂಬೇಡ್ಕರ್ ಬರೀ ವ್ಯಕ್ತಿ ಅಲ್ಲ ಅವರೊಂದು ಮಹಾನ್ ಶಕ್ತಿ ಎಂದು ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ ಹೇಳಿದರು.
ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜಯಂತಿ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.
ಅಂಬೇಡ್ಕರ್ ಇಡೀ ಜಗತ್ತು ಮೆಚ್ಚುವ ಸಂವಿಧಾನವನ್ನು ರಚಿಸಿದ್ದಾರೆ. ಈ ಮೂಲಕ ಭಾರತ ದೇಶದ ಆಡಳಿತ ವ್ಯವಸ್ಥೆಗೆ ಹೊಸ ಆಯಾಮ ತಂದುಕೊಟ್ಟಿದ್ದಾರೆ. ದಲಿತರು, ಮಹಿಳೆಯರು ಹಾಗೂ ಕಾರ್ಮಿಕರ ಪರವಾಗಿ ಹೋರಾಡಿದ್ದಾರೆ. ಹೀಗಾಗಿ ನಾವೆಲ್ಲರೂ ಅವರನ್ನು ಸದಾ ಸ್ಮರಿಸಿಕೊಂಡು, ಅವರು ಸಾಗಿ ಬಂದ ದಾರಿಯಲ್ಲಿ ನಡೆಯಬೇಕಿದೆ ಎಂದು ತಿಳಿಸಿದರು.
ಚುಡಾ ಅಧ್ಯಕ್ಷ ಮಹಮದ್ ಅಸ್ಗರ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್, ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ವಕೀಲ ಚಿನ್ನಸ್ವಾಮಿ, ಕೆಪಿಸಿಸಿ ಸದಸ್ಯ ಸೈಯದ್ ರಫಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆರ್.ಮಹದೇವ್, ಜಿಲ್ಲಾ ಕಾಂಗ್ರೆಸ್ ಗ್ರಾಮಾಂತರ ಅಧ್ಯಕ್ಷ ಎ.ಎಸ್.ಗುರುಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ವಿ.ಚಂದ್ರು, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಸೋಮೇಶ್ವರ್, ಸದಸ್ಯರಾದ ಮರಿಯಾಲದ ಹುಂಡಿ ಕುಮಾರ್, ರಾಜೇಶ್, ಚಿನ್ನಸ್ವಾಮಿ, ಕುಮಾರಸ್ವಾಮಿ, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ನಾಗರತ್ನ, ಗ್ರಾಮಾಂತರ ಮಹಿಳಾ ಬ್ಲಾಕ್ ಅಧ್ಯಕ್ಷೆ ಶಕುಂತಲಾ, ಚುಡಾ ಸದಸ್ಯ ರಾಜು, ಪುಟ್ಟಸ್ವಾಮಿ, ನಾಗವಳ್ಳಿ ನಾಗಯ್ಯ, ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿ ಕಾರ್ಯದರ್ಶಿ ಎ.ಎಚ್.ನಸ್ರುಲ್‌ಖಾನ್, ಎಪಿಎಂಸಿ ಅಧ್ಯಕ್ಷ ಗುರುಸ್ವಾಮಿ, ಸದಸ್ಯ ಸೋಮೇಶ್, ನಗರಸಭೆ ಮಾಜಿ ಅಧ್ಯಕ್ಷೆ ಚಿನ್ನಮ್ಮ, ಚುಡಾ ಮಾಜಿ ಅಧ್ಯಕ್ಷ ಸುಹೇಲ್ ಆಲಿಖಾನ್, ನಗರಸಭೆ ಮಾಜಿ ಸದಸ್ಯರಾದ ಮಹದೇವಯ್ಯ, ಕಲಾವತಿ ಇತರರು ಹಾಜರಿದ್ದರು.