ಚಾಮರಾಜನಗರದ ನ್ಯಾಯಾಲಯ ರಸ್ತೆಯಲ್ಲಿರುವ ಶ್ರೀರಾಮಚಂದ್ರ ವಿದ್ಯಾಸಂಸ್ಥೆಯಲ್ಲಿ 135ನೇ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಪುಷ್ಪಾರ್ಚನೆ ನೆರವೇರಿಸಲಾಯಿತು. ರುದ್ರಮೂರ್ತಿ, ಎಂ.ಎಸ್.ಮಾದಯ್ಯ, ಬಿ.ಮಹದೇವಯ್ಯ, ಮಹೇಶ್, ರತ್ನಮ್ಮ, ರಂಗಸ್ವಾಮಿ, ಕುಮಾರ್, ಪರಶಿವಮೂರ್ತಿ ಇತರರು ಇದ್ದರು. 
ಚಾಮರಾಜನಗರ

ಸಮಾನತೆಯ ಹರಿಕಾರ ಅಂಬೇಡ್ಕರ್

ಪ್ರಮುಖ ಮುಖ್ಯಾಂಶಗಳು

  • ಶ್ರೀರಾಮಚಂದ್ರ ವಿದ್ಯಾಸಂಸ್ಥೆ ಕಾರ್ಯದರ್ಶಿ ರುದ್ರಮೂರ್ತಿ ಬಣ್ಣನೆ
  • ವಿದ್ಯಾಸಂಸ್ಥೆಯಲ್ಲಿ 135ನೇ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ
ಚಾಮರಾಜನಗರ: ಸಮಾನತೆಯ ಹರಿಕಾರ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನಾಚರಣೆ ಆದರ್ಶ ಪ್ರಸಾರದ ಪ್ರತೀಕ ಎಂದು ಶ್ರೀರಾಮಚಂದ್ರ ವಿದ್ಯಾಸಂಸ್ಥೆ ಕಾರ್ಯದರ್ಶಿ ರುದ್ರಮೂರ್ತಿ ತಿಳಿಸಿದರು.
ನಗರದ ನ್ಯಾಯಾಲಯ ರಸ್ತೆಯಲ್ಲಿರುವ ಶ್ರೀರಾಮಚಂದ್ರ ವಿದ್ಯಾಸಂಸ್ಥೆಯಲ್ಲಿ 135ನೇ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅಂಬೇಡ್ಕರ್ ಅವರ ಸಾಮಾಜಿಕ ಸಮಾನತೆ ಮತ್ತು ಶೋಷಿತರ ಪರವಾದ ಹೋರಾಟವನ್ನು ನೆನಪಿಸಿಕೊಳ್ಳಲು ಈ ದಿನವನ್ನು ದೇಶಾದ್ಯಂತ ಆಚರಿಸಲಾಗುತ್ತದೆ. ಅಂಬೇಡ್ಕರ್ ಅವರು ಭಾರತದ ಸಂವಿಧಾನವನ್ನು ರಚಿಸಿದರು. ಕೆಲವರು ಈ ದಿನವನ್ನು ಸಮಾನತೆಯ ದಿನ ಎಂದೂ ಆಚರಿಸುತ್ತಾರೆ. ಅಸಂಘಟಿತರ ಸಂಘಟನೆ ಮತ್ತು ಹೋರಾಟದ ಮೂಲಕ ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸಬೇಕೆಂಬ ಸಂದೇಶವನ್ನು ಇವರು ನೀಡಿದ್ದಾರೆ ಎಂದು ಹೇಳಿದರು.
ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಮಾದಯ್ಯ ಮಾತನಾಡಿ, ವಿದ್ಯಾರ್ಥಿಗಳು ಓದಿನ ಕಡೆ ಗಮನ ಹರಿಸಬೇಕು. ವಿದ್ಯೆ ನಿಮ್ಮನ್ನು ಜ್ಞಾನದ ಕಡೆಗೆ ಕರೆದೊಯುತ್ತದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಶಿಕ್ಷಣ ಕ್ಷೇತ್ರದಲ್ಲಿ ಬಹಳಷ್ಟು ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳು ಅವರ ಮಾರ್ಗದಲ್ಲಿ ನಡೆದರೆ ಉತ್ತಮ ವ್ಯಕ್ತಿಯಾಗಲು ಸಾಧ್ಯ ಎಂದರು. ಸಂಸ್ಥೆಯ ನಿರ್ದೇಶಕರಾದ ಬಿ.ಮಹದೇವಯ್ಯ, ಮಹೇಶ್, ಪ್ರೌಢಶಾಲೆ ಮುಖ್ಯ ಶಿಕ್ಷಕಿ ರತ್ನಮ್ಮ, ದೈಹಿಕ ಶಿಕ್ಷರಾದ ರಂಗಸ್ವಾಮಿ, ಕುಮಾರ್, ಪರಶಿವಮೂರ್ತಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.