ಮೆಲ್ಲಹಳ್ಳಿ ಗ್ರಾಮದ ಕೆರೆ ಏರಿ ಮೇಲೆ ಹಾದು ಹೋಗಿರುವ ರಸ್ತೆಯಲ್ಲಿ ಶನಿವಾರ ರಾತ್ರಿ ಅಪರಿಚಿತ ವಾಹನ ಡಿಕ್ಕಿ 
ಚಾಮರಾಜನಗರ

ಅಪರಿಚಿತ ವಾಹನ ಡಿಕ್ಕಿ, ಪಾದಚಾರಿ ಸಾವು

ಯಳಂದೂರು: ತಾಲೂಕಿನ ಮೆಲ್ಲಹಳ್ಳಿ ಗ್ರಾಮದ ಕೆರೆ ಏರಿ ಮೇಲೆ ಹಾದು ಹೋಗಿರುವ ರಸ್ತೆಯಲ್ಲಿ ಶನಿವಾರ ರಾತ್ರಿ ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಮೆಲ್ಲಹಳ್ಳಿ ಗ್ರಾಮದ ನಿವಾಸಿ ನಾಗರಾಜು (60) ಮೃತಪಟ್ಟ ದುರ್ದೈವಿ. ಶನಿವಾರ ರಾತ್ರಿ 10.30ರ ಸಮಯದಲ್ಲಿ ಮೆಲ್ಲಹಳ್ಳಿ ಕೆರೆಯ ಏರಿಯಲ್ಲಿರುವ ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲಿ ಸಾವಿಗೀಡಾಗಿದ್ದಾರೆ.
ಕೆಲ ಸಮಯದ ಬಳಿಕ ರಕ್ತದ ಮಡುವಿನಲ್ಲಿ ನಾಗರಾಜು ಬಿದ್ದಿರುವುದನ್ನು ಸ್ಥಳೀಯರು ಗಮನಿಸಿ ಮೆಲ್ಲಹಳ್ಳಿ ಗ್ರಾಮದಲ್ಲಿರುವ ಅವರ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಕುಟುಂಬದ ವರ್ಗದವರು ಆಗಮಿಸಿ ಯಳಂದೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸ್ ಸಿಬ್ಬಂದಿ ಶವವನ್ನು ಮರಣೊತ್ತರ ಪರೀಕ್ಷೆ ಕಳುಹಿಸಿ ದೂರು ದಾಖಲಿಸಿಕೊಂಡು ಮುಂದಿನ ಕ್ರಮ ವಹಿಸಿದ್ದಾರೆ. ಮೃತರ ಅಂತ್ಯಕ್ರಿಯೆಯು ಸ್ವಗ್ರಾಮದಲ್ಲಿ ಭಾನುವಾರ ನೆರವೇರಿತು.