ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಶ್ರೀರೂಪಾ ಅವರಿಗೆ ಮನವಿ ಸಲ್ಲಿಸಿದರು.  
ಚಾಮರಾಜನಗರ

ಸರ್ಕಾರಿ ಶಾಲೆ ಕಟ್ಟಡ ದುರಸ್ತಿಗೆ ಮನವಿ

ಪ್ರಮುಖ ಮುಖ್ಯಾಂಶಗಳು

  • ಭಗತ್ ಸಿಂಗ್ ಯುವ ಸೇನೆ ವತಿಯಿಂದ ಆಗ್ರಹ
  • ಜಿಲ್ಲಾಧಿಕಾರಿ ಶ್ರೀರೂಪಾ ಅವರಿಗೆ ಮನವಿ
  • ಇನ್ನಿತರೆ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ
ಚಾಮರಾಜನಗರ: ತಾಲೂಕಿನ ಕೋಡಿಮೋಳೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡದುರಸ್ತಿ ಹಾಗೂ ಇನ್ನಿತರೆ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭಗತ್ ಸಿಂಗ್ ಯುವ ಸೇನೆ ಹಾಗೂ ಜಿಲ್ಲಾ ಉಪ್ಪಾರ ಸಂಘದ ಪದಾಧಿಕಾರಿಗಳ ವತಿಯಿಂದ ಮಂಗಳವಾರ ಮನವಿ ಸಲ್ಲಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಶ್ರೀರೂಪಾ ಅವರಿಗೆ ಮನವಿ ಸಲ್ಲಿಸಿದರು. ಕೋಡಿಮೋಳೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡ ಸುಮಾರು ಆರೇಳು ವರ್ಷಗಳಿಂದ ಹಾಳಾಗಿದ್ದು, ಶೀಘ್ರವೇ ಸರ್ಕಾರದಿಂದ ಸೂಕ್ತ ಅನುದಾನಮಂಜೂರು ಮಾಡಿಸುವ ಮೂಲಕ ಹೆಚ್ಚುವರಿ ಕೊಠಡಿ ನಿರ್ಮಾಣ ಮಾಡಿಕೊಡಬೇಕು. ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಉದ್ಯಾನವನದಲ್ಲಿ ಮಕ್ಕಳ ಆಟೋಪಕರಣಗಳು ಸಹ ಹಾಳಾಗಿದ್ದು, ಅವುಗಳನ್ನು ಸರಿಪರಿಸಬೇಕು ಎಂದು ಒತ್ತಾಯಿಸಿದರು.
ಪಟ್ಟಣದ ಪೂರ್ವ ಪೊಲೀಸ್ ಠಾಣೆ ಎದುರುಗಡೆಯಿಂದ ಚೆನ್ನಿಪುರಮೋಳೆ ಭಗೀರಥ ಮಹರ್ಷಿ ಮಾರ್ಗದಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣ ಮಾಡಬೇಕು ಹಾಗೂ ಬೀದಿದೀಪಗಳ ಅಳವಡಿಕೆ ಮಾಡಬೇಕು. ಚಾಮರಾಜನಗರದಿಂದ ಬಿಆರ್‌ಹಿಲ್ಸ್ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಕೋಡಿಮೋಳೆ ಗ್ರಾಮದ ಎರಡು ಬದಿಯ ಚರಂಡಿ ನಿರ್ಮಾಣ ಮಾಡಿಕೊಡಬೇಕೆಂದು ಮನವಿಯಲ್ಲಿ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಗಡಿಯಜಮಾನರಾದ ಜಯಸ್ವಾಮಿ, ಹರದನಹಳ್ಳಿ ಪಿಎಸಿಸಿ ಮಾಜಿ ಅಧ್ಯಕ್ಷ ಬಂಗಾರ ಶೆಟ್ಟಿ, ಮಹದೇವಸ್ವಾಮಿ, ಭಗತ್ ಸಿಂಗ್ ಯುವಸೇನೆ ಅಧ್ಯಕ್ಷ ಕೋಡಿಮೋಳೆ ಕಾಂತರಾಜು, ಜಿಲ್ಲಾ ಉಪ್ಪಾರ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಎಸ್. ನಾಗರಾಜು ಹಾಜರಿದ್ದರು.