ಯಳಂದೂರಿನ ಪೌರ ಕಾರ್ಮಿಕರ ಕಾಲನಿನಲ್ಲಿ ಸೋಮವಾರ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರ ಹುಟ್ಟುಹಬ್ಬದ ನಿಮಿತ್ತ ಅವರ ಅಭಿಮಾನಿ ಬಗಳದ ವತಿಯಿಂದ ತಾಲೂಕಿನ ಪೌರಕಾರ್ಮಿಕರಿಗೆ ವಸ್ತ್ರಗಳನ್ನು ವಿತರಿಸಲಾಯಿತು. ಕಂದಹಳ್ಳಿ ನಂಜುಂಡಸ್ವಾಮಿ, ಎಚ್.ವಿ. ಚಂದ್ರು ಸೇರಿದಂತೆ ಅನೇಕರು ಇದ್ದರು.
ಯಳಂದೂರು: ಪಟ್ಟಣದ ಪೌರ ಕಾರ್ಮಿಕರ ಕಾಲೋನಿಯಲ್ಲಿ ಸೋಮವಾರ ಶಾಸಕ ಎ.ಆರ್. ಕೃಷ್ಣಮೂರ್ತಿ ಅಭಿಮಾನಿ ಬಳಗದ ವತಿಯಿಂದ ಪಟ್ಟಣ ಪಂಚಾಯಿತಿ ಸೇರಿದಂತೆ ತಾಲೂಕಿನ 12 ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಮತ್ತು ಪುರುಷ ಪೌರ ಕಾರ್ಮಿಕರಿಗೆ ವಸ್ತ್ರಗಳನ್ನು ವಿತರಣೆ ಮಾಡಲಾಯಿತು.
ಅಭಿಮಾನಿ ಬಳಗದ ಕಂದಹಳ್ಳಿ ನಂಜುಂಡಸ್ವಾಮಿ ಮಾತನಾಡಿ, ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾಗಿ ಆಯ್ಕೆಗೊಂಡ ಎ.ಆರ್.ಕೃಷ್ಣಮೂರ್ತಿ ಜನಾನುರಾಗಿ ಶಾಸಕರಾಗಿದ್ದಾರೆ. ತಮ್ಮ ಅಧಿಕಾರದ ಅವಧಿಯ ಎರಡೂವರೆ ವರ್ಷಗಳ ಅವಧಿಯಲ್ಲಿ ಕ್ಷೇತ್ರಕ್ಕೆ ಶಾಶ್ವತ ಕೆಲಸಗಳನ್ನು ಮಾಡುವ ನಿಟ್ಟಿನಲ್ಲಿ ಅವರು ಪಣ ತೊಟ್ಟಿದ್ದಾರೆ ಎಂದರು.
ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಚ್.ವಿ.ಚಂದ್ರು ಮಾತನಾಡಿ, ಎ.ಆರ್.ಕೃಷ್ಣಮೂರ್ತಿ ನಾಡುಕಂಡ ಧೀಮಂತ ರಾಜಕಾರಣಿ ಬಿ.ರಾಚಯ್ಯರವರ ಸುಪುತ್ರರಾಗಿದ್ದಾರೆ. ಇವರ ರಕ್ತದಲ್ಲೇ ಸೇವೆ ಎಂಬುದು ಇದೆ. ರಾಜಕೀಯವನ್ನು ರಕ್ತಗತವಾಗಿ ಅರಗಿಸಿಕೊಂಡಿರುವ ಇವರಿಗೆ ಸಾಮಾಜಿಕ ಕಳಕಳಿ ಹೆಚ್ಚು, ನೇರ ನಡೆ, ನುಡಿಯಿಂದ ಕ್ಷೇತ್ರದ ಅಭಿವೃದ್ಧಿಪರ ಚಿಂತನೆಯುಳ್ಳ ನಾಯಕರಾಗಿ ಗುರುತಿಸಿಕೊಂಡಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಪೌರ ಕಾರ್ಮಿಕರ ಜಿಲ್ಲಾಧ್ಯಕ್ಷ ಆರ್ಮುಗಂ ಪೌರ ಕಾರ್ಮಿಕರಿಗೆ ಇರುವ ವಸತಿ ಸೇರಿದಂತೆ ಇತರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶಾಸಕರಿಗೆ ಮನವಿ ಪತ್ರವನ್ನು ಅವರ ಅಭಿಮಾನಿ ಬಳಗದ ಮೂಲಕ ಸಲ್ಲಿಸಿದರು.
ಪಪಂ ಮುಖ್ಯಾಧಿಕಾರಿ ಎಂ.ಪಿ.ಮಹೇಶ್‌ಕುಮಾರ್ ಮಾತನಾಡಿದರು. ಮಾಜಿ ಸದಸ್ಯರಾದ ಮಹೇಶ್, ವೈ.ಜಿ.ರಂಗನಾಥ, ಲಿಂಗರಾಜಮೂರ್ತಿ, ಮುನಾವರ್‌ಬೇಗ್ ಬಿಳಿಗಿರಿರಂಗನಾಥಸ್ವಾಮಿ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜೆ.ಶ್ರೀನಿವಾಸ್, ಗ್ಯಾರಂಟಿ ಯೋಜನೆಯ ತಾಲೂಕು ಅಧ್ಯಕ್ಷ ಕಿನಕಹಳ್ಳಿ ಪ್ರಭುಪ್ರಸಾದ್, ತಾಪಂ ಮಾಜಿ ಅಧ್ಯಕ್ಷ ನಿರಂಜನ್, ಕೇಶವಮೂರ್ತಿ, ಗುಂಬಳ್ಳಿ ರಾಜಣ್ಣ, ಪ್ರಕಾಶ್, ರೇವಣ್ಣ, ಮಲ್ಲು, ನಂಜುಂಡಸ್ವಾಮಿ ಸೇರಿದಂತೆ ಅನೇಕರು ಇದ್ದರು.