ಗುಂಡ್ಲುಪೇಟೆ: ತಾಲೂಕಿನ ಬೇಗೂರು ಪೊಲೀಸರು ಕಾರ್ಯಾಚರಣೆ ನಡೆಸಿ ಜೂಜಾಡುತ್ತಿದ್ದವರನ್ನು ಬಂಧಿಸಿದ್ದಾರೆ.
ಠಾಣೆ ವ್ಯಾಪ್ತಿಯ ಕಮರಹಳ್ಳಿ ಸಮೀಪ ಜೂಜಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಸಬ್‌ಇನ್‌ಸ್ಪೆಕ್ಟರ್ ನವೀನ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ಆರು ಆರೋಪಿಗಳಿಂದ 41 ಸಾವಿರ ರೂ. ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಪಟ್ಟಣದ ಪೊಲೀಸರು ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ಕೇರಳ ಲಾಟರಿ ಮಾರುತ್ತಿದ್ದವರ ಬಂಧನ: ಪಟ್ಟಣದ ಊಟಿ ಸರ್ಕಲ್ ಸಮೀಪ ಕೇರಳ ಲಾಟರಿ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಪಟ್ಟಣದ ನಿವಾಸಿ ಮಣಿಕಂಠ ಎಂಬಾತನಿಂದ 5800 ರೂ. ಮೌಲ್ಯದ 116 ಲಾಟರಿ ಟಿಕೆಟ್ ಹಾಗೂ ಟಿಕೆಟ್ ಮಾರಾಟ ಮಾಡಿದ್ದ 5,300 ರೂ. ನಗದನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.